ಶ್ರೀಗುಹೇಶ್ವರ ದೇವರ ದೀಪೋತ್ಸವ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕಾರ್ತಿಕ ದೀಪೆÇೀತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.ಶ್ರೀಗುಹೇಶ್ವರ ದೇವರ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀದೇವರಿಗೆ ಗಣಹೋಮ,ಏಕದಶಾ ರುದ್ರಾಭಿಷೇಕ,ರುದ್ರ ಹವನ,ರಂಗಪೂಜೆ,ಮಹಾಮಂಗಳಾರತಿ,ಭಜನಾ ಕಾರ್ಯಕ್ರಮ,ವೀರ ವೃಷಸೇನ ಮತ್ತು ಕದಂಬ ಕೌಶಿಕೆ ಎನ್ನುವ ಯಕ್ಷಗಾನ ಪ್ರದರ್ಶನ ನಡೆಯಿತು.

ನಿವೃತ್ತ ಆರೋಗ್ಯ ಕಾರ್ಯಕರ್ತೆ ಸರಳಗೆ ಸನ್ಮಾನ

ಕುಂದಾಪುರ:ನೂಜಾಡಿ ಹಾಗೂ ಹಕ್ಲಾಡಿ ಗ್ರಾಮದಲ್ಲಿ 40 ವರ್ಷಗಳಿಂದ ಆರೋಗ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ,ಸೇವಾ ನಿವೃತ್ತಿ ಹೊಂದಿರುವ ಹಿರಿಯ ಆರೋಗ್ಯ ಕಾರ್ಯಕರ್ತೆ ಸರಳಾ ಅವರನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-1 ವತಿಯಿಂದ ಸನ್ಮಾನಿಸಲಾಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ವೀಣಾರಾಣಿ,ಹಕ್ಲಾಡಿ ಪಂಚಾಯಿತಿ ಸದಸ್ಯ ಪ್ರವೀಣ ಶೆಟ್ಟಿ,ಸುದೇಶ,ಅಂಗನವಾಡಿ ಕಾರ್ಯಕರ್ತೆ ದೀಪಾ ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯ ತಿಮ್ಮಪ್ಪ ಶೆಟ್ಟಿ ಸ್ವಾಗತಿಸಿದರು,ವಂದಿಸಿದರು.

ಉಪ್ಪುಂದ:ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪ್ರಸಾದ ಸ್ವೀಕರಿಸಿದರು. ಕೋಟೇಶ್ವರದ ’ಕೊಡಿ’ ಹಬ್ಬದ ಮಾರನೇಯ ದಿನದಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೊಡಿ ಹಬ್ಬ ನಡೆಯುತ್ತದೆ.ಬೈಂದೂರು ಹಾಗೂ ಉಪ್ಪುಂದ ಭಾಗದ ಜನರು ’ಉಪ್ಪುಂದದ ಕೊಡಿ ಹಬ್ಬ’ ಎಂದು ಕರೆಯುವ ಸಂಪ್ರದಾಯವಿದೆ.ಹೊಸ ಮದುಮಕ್ಕಳು ಹಾಗೂ ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತುಕೊಳ್ಳುವವರು ಹಬ್ಬದ ದಿನದಂದು ಶ್ರೀ ದೇವಿಯ ದರ್ಶನ ಮಾಡಿ […]

You cannot copy content of this page