ಚಂದ್ರಯಾ-3 ಯಶಸ್ಸಿಗೆ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಹರ್ಷ

ಬೆಂಗಳೂರು:ಯಶ್ವಸಿಯಾಗಿ ಉಡಾವಣೆಗೊಂಡಿದ್ದ ಚಂದ್ರಯಾನ-2 ,2019 ರ ಸೆಪ್ಟೆಂಬರ್ 6 ರಂದು ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡಾಗ ಅಂದಿನ ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರು ಕಣ್ಣೀರಿಟ್ಟು ತಮ್ಮ ನೋವಿನ ಭಾವನೆಯನ್ನು ಜಗತ್ತಿನ ಮುಂದಿಟ್ಟಿದ್ದರು.ಯಶಸ್ವಿ ಪ್ರಯೋಗ ಕೊನೆ ಕ್ಷಣದಲ್ಲಿ ಹಾದಿ ತಪ್ಪಿದ್ದಾಗ ಇಡಿ ಭಾರತ ದೇಶ ಶೋಕ ಸಾಗರದಲ್ಲಿ ಮುಳುಗಿ ಹೋಗಿತ್ತು.ವಿಜ್ಞಾನಿಗಳ ಜತೆಗೆ ಭಾರತೀಯರು ಕೂಡ ತಮ್ಮ ದುಗುಡವನ್ನು ಹೊರ ಹಾಕಿರುವುದು ಇನ್ನೂ ಕೂಡ ಕಣ್ಣ ಮುಂದಿದೆ.ದೇಶದ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಇಸ್ರೋ ಅಧ್ಯಕ್ಷ ಕೆ.ಶಿವನ್ […]

ಮೀನುಗಾರರಿಂದ ಸಮುದ್ರ ರಾಜನಿಗೆ ಪ್ರಾರ್ಥನೆ ಸಲ್ಲಿಕೆ

ಬೈಂದೂರು:ಮೀನುಗಾರಿಕೆ ಕುಂಠಿತವಾದ ಹಿನ್ನೆಲೆಯಲ್ಲಿ ಮತ್ಸ್ಯ ಸಂಪತ್ತು ವೃದ್ಧಿಯಾಗಲಿ ಎಂದು ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಮಹಾರಾಜ ಸ್ವಾಮಿ ಶ್ರೀವರಾಹ ದೇವರಿಗೆ ಬುಧವಾರ ವಿಶೇಷವಾದ ಪೂಜೆ ಸಲ್ಲಿಸಿ,ಸಮುದ್ರ ರಾಜನಿಗೆ ಪ್ರಾರ್ಥನೆ ಸಲ್ಲಿಸಲಾಯಿತು.ಈ ಸಂದರ್ಭ ಶ್ರೀರಾಮ ಮಂದಿರ ಮರವಂತೆ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ ಮತ್ತು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಛಾಯಾ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು ಉಡುಪಿ ಅವರ ಜಂಟಿ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ ಪೂಜಾರಿ ಅವರು ವಿಜೇತರಾಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

You cannot copy content of this page