ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಾಟಾ(NATA) ತರಗತಿಯ ಉದ್ಘಾಟನೆ,ಮಾಹಿತಿ ಕಾರ್ಯಕ್ರಮ.

ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾಗಿರುವ ನಾಟಾ(NATA) ಪರೀಕ್ಷೆಯ ತರಬೇತಿಯ ಕುರಿತಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಅಗತ್ಯತೆಯ ಕುರಿತು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಚಂದ್ರಶೇಖರ್ ರವರು ನಾಟಾ(NATA) ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು.ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ಬೋಧಕ ಬೋಧಕೇತರ ವೃಂದದವರು,ವಿದ್ಯಾರ್ಥಿಗಳು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.ಉಪನ್ಯಾಸಕ ಅಭಿಜಿತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಗಂಗೊಳ್ಳಿ:ಅಷ್ಟೋತರ ಸಹಸ್ರ ನಾಳಿಕೇರ ಮಹಾಗಣಯಾಗ

ಕುಂದಾಪುರ:ಶ್ರೀಗಣೇಶೋತ್ಸವ ಸಮಿತಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಗಂಗೊಳ್ಳಿ ಅದರ 31ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಗಣಪತಿ ದೇವರಿಗೆ 1008 ಕಾಯಿಗಳ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾ ಗಣಯಾಗ ಮತ್ತು ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಹಾಗೂ ಕುಣಿತ ಭಜನಾ ಕಾರ್ಯಕ್ರಮ ಗುರುವಾರ ನಡೆಯಿತು.

ಮರವಂತೆ:ಶ್ರೀ ವರಾಹ ಜಯಂತಿ ಉತ್ಸವ ಕಾರ್ಯಕ್ರಮ

ಬೈಂದೂರು:ಮರವಂತೆ ಶ್ರೀಕ್ಷೇತ್ರ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕಾಲಂಪ್ರತಿ ನಡೆಯುವ ವರಾಹ ಜಯಂತಿ ಉತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಪ್ರದಾಯ ಬದ್ಧವಾಗಿ ನಡೆಯಿತು.ವರಾಹ ಜಯಂತಿ ಕಾರ್ಯಕ್ರಮದ ಅಂಗವಾಗಿ ಶ್ರೀಕ್ಷೇತ್ರದಲ್ಲಿ ವರಾಹ ಹೋಮ,ಮಹಾ ಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಜರುಗಿತು.ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಎಂ ನಾಯಕ ಮತ್ತು ಸದಸ್ಯರು,ದೇವಳದ ಅರ್ಚಕರು,ಉಪಾದಿವಂತರು,ಸಿಬ್ಬಂದಿಗಳು,ಗ್ರಾಮಸ್ಥರು ಹಾಗೂ ಸೇವಾಕರ್ತರಾದ ಪಿ ಮಹೇಶ್ ಬೆಂಗಳೂರು(ಚಿತ್ತೂರು,ಆಂಧ್ರಪ್ರದೇಶ) ಉಪಸ್ಥಿತರಿದ್ದರು.

You cannot copy content of this page