ಮೀನುಗಾರರಿಗೆ ಪರಿಹಾರ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಮುಖ್ಯಮಂತ್ರಿಗಳಿಗೆ ಮನವಿ
ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮುಖ್ಯಮಂತ್ರಿ ಸಿದ್ದರಾಮ್ಯನವರನ್ನು ಬೆಂಗಳೂರಿನಲ್ಲಿ ಬುಧವಾರ ಭೇಟಿಮಾಡಿ ಕುಂದಾಪುರ ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಕಷ್ಟಕ್ಕೆ ಈಡಾಗಿದ್ದ ಮೀನುಗಾರರಿಗೆ ಪರಿಹಾರ ನೀಡುವಂತೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಅವರು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿ ಬಳಿಕ ಮಾತನಾಡಿ,ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಂಭವಿಸಿದ […]