ವಿವೇಕ ಕೊಠಡಿ ಉದ್ಘಾಟನೆ,ಚಿಣ್ಣರ ಕಲರವ ಕಾರ್ಯಕ್ರಮ
ಕುಂದಾಪುರ:ಮುಗ್ಧ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ,ಮಕ್ಕಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಪಾಲಕರು,ಶಿಕ್ಷಕರು,ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಕೊಡಪಾಡಿ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಉದ್ಘಾಟಿಸಿದ ಅವರು ಚಿಣ್ಣರ ಕಲರವ ಕಾರ್ಯಕ್ರಮದಲ್ಲಿ ಭಾಗವವಹಿಸಿ ಮಾತನಾಡಿದರು.ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ.ಪಂ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಪಂಚಾಯಿತಿ ಉಪಾಧ್ಯಕ್ಷೆ ನಾಗರತ್ನ ಮತ್ತು ಸದಸ್ಯರಾದ ಹರೀಶ್ […]