ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಅಣುಕು ಯುವ ಸಂಸತ್ ಸ್ಪರ್ಧೆ
ಹೆಮ್ಮಾಡಿ:ಸಂಸದೀಯ ವ್ಯವಹಾರಗಳ ಇಲಾಖೆ,ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಅದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಅಣುಕು ಯುವ ಸಂಸತ್ ಸ್ಪರ್ಧೆ ನಡೆಯಿತು. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳು ದೇಶದ ಸಂಪತ್ತಾಗಿದ್ದಾರೆ.ದೇಶ ಅಭಿವೃದ್ಧಿ ಪಥದತ್ತ ಸಾಗಲು ಯುವಕರ ಕೊಡುಗೆ ಅಪಾರ ವಾದದ,ವಿದ್ಯಾರ್ಜನೆ ಜತೆಯಲ್ಲಿ ಕೌಶಲ್ಯ ವರ್ಧಿತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕಾಗಿದೆ ಎಂದರು.ಅಣುಕು […]























































































































































































































































































































































































































































































































































































































































































































































































































































































































































































































































































































































































































































































































































































































































































