ಹೆಮ್ಮಾಡಿ:ಜನತಾ ಆವಿಷ್ಕಾರ್ 2ಕೆ23 ಕಾರ್ಯಕ್ರಮ ಉದ್ಘಾಟನೆ
ಕುಂದಾಪುರ:ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಜನತಾ ಆವಿಷ್ಕಾರ 2ಕೆ23 ಕಾರ್ಯಕ್ರಮದ ಅಂಗವಾಗಿ ವಿಜ್ಞಾನ ವಿಸ್ಮಯ,ವ್ಯವಹಾರ ಮೇಳ,ಜಾನಪದ ಹಬ್ಬ,ಚಿತ್ರ ಚಿತ್ತಾರ ಮತ್ತು ಭಾವ ಸಂಗಮ ಕಾರ್ಯಕ್ರಮ ಅದ್ದೂರಿಯಾಗಿ ಗುರುವಾರ ನಡೆಯಿತು.ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಅವರು ಜನತಾ ಆವಿಷ್ಕಾರ್ 2ಕೆ23 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಬಡವರ ಮಕ್ಕಳಿಗೆ ಸಂಪೂರ್ಣವಾಗಿ ಶಿಕ್ಷಣ ದೊರಕಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿದೆ.ಮಕ್ಕಳ ಬುದ್ದಿ ಶಕ್ತಿಗೆ ಅನುಗುಣವಾಗಿ ಶಿಕ್ಷಣವನ್ನು ನೀಡಲು ಶಿಕ್ಷಣ ಸಂಸ್ಥೆಗಳು ಪ್ರಯತ್ನಿಸಬೇಕು.ತಮ್ಮ ಪ್ರತಿಭೆಯನ್ನು ಹೊರಗೆ ತರಲು […]