ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ಆಚರಣೆ
ಬ್ರಹ್ಮಾವರ:ತನು ಕನ್ನಡ ಮನ ಕನ್ನಡ ಎಂಬ ಕವಿ ವಾಣಿಯಂತೆ ಕನ್ನಡದ ಕುರಿತು ವಿಶೇಷವಾದ ಅಭಿಮಾನವನ್ನು ಹೊಂದಿರುವ ಹೆಮ್ಮೆಯ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಬುಧವಾರ ಆಚರಿಸಲಾಯಿತು.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕನ್ನಡ ಸಮೂಹಗೀತೆ,ಕನ್ನಡ ಭಾಷಣ ಸ್ಪರ್ಧೆಯನ್ನು ನಡೆಸಲಾಯಿತು. ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ ಮತ್ತು ಕಾಲೇಜಿನ ಪ್ರಿನ್ಸಿಪಾಲ್ ಡಾ.ಸೀಮಾ ಜಿ ಭಟ್, ವೈಸ್ ಪ್ರಿನ್ಸಿಪಾಲ್ ಶ್ರೀಮತಿ ಸುಜಾತ ,ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾದ ಶ್ರೀಮತಿ […]