ಮೊವಾಡಿ:ಬಾಲ ಭವನ ಉದ್ಘಾಟನಾ ಕಾರ್ಯಕ್ರಮ
ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ಸುಮಾರು 3.5 ಲಕ್ಷ.ರೂ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸುಸಜ್ಜಿತವಾದ ನೂತನ ಬಾಲ ಭವನದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಅದ್ದೂರಿಯಾಗಿ ನಡೆಯಿತು. ಕೆನರಾ ಬ್ಯಾಂಕ್ ಮಣಿಪಾಲ ಸರ್ಕಲ್ ಡಿಜಿಎಂ ಶ್ರೀಜೀತ್ ಬಾಲವನ್ನು ಉದ್ಘಾಟಿಸಿ ಮಾತನಾಡಿ,ಶಾಲಾ ಮಕ್ಕಳ ಕಲಿಕಾ ಚಟುವಟಿಕೆಗೆ ಬಾಲ ಭವನ ಬಹಳಷ್ಟು ಸಹಕಾರಿ ಆಗಲಿದೆ ಶಾಲೆಯತ್ತಾ ಮಕ್ಕಳು ಧಾವಿಸಿ ಬರುವಂತೆ ಪೂರಕ ವಾತಾವರಣ ನಿರ್ಮಾಣವಾಗಿದ್ದು ಮಕ್ಕಳ ಮನಸಿಗೆ ಸಂತೋಷವನ್ನು ಉಂಟುಮಾಡಲಿದೆ ಎಂದು ಶುಭಹಾರೈಸಿದರು.ನಿವೃತ್ತ […]