ಹೊಸಾಡು:ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

ಕುಂದಾಪುರ:ಸಂಪನ್ಮೂಲ ಕ್ರೋಢೀಕರಣ,ವಲಸೆ ಕಾರ್ಮಿಕರ ಶಿಕ್ಷಣಕ್ಕೆ ಒತ್ತು,ಅಮೃತಾ ಆರೋಗ್ಯ ಅಭಿಯಾನ,ಶೇ.100 ತ್ಯಾಜ್ಯ ಸಂಗ್ರಹಣೆ,ಮನೆ ಮನೆಗೆ ಕುಡಿಯುವ ನೀರು ಸಂಪರ್ಕ ವ್ಯವಸ್ಥೆ,ಮಕ್ಕಳಿಗಾಗಿ ಪ್ರತ್ಯೇಕ ಡಿಜಿಟಲ್ ಗ್ರಂಥಾಲಯ ಸ್ಥಾಪನೆ,ಉದ್ಯೋಗ ಖಾತ್ರಿ ಯೋಜನೆ ಪ್ರಗತಿ,15 ನೇ ಹಣಕಾಸು ಯೋಜನೆ ಅನುದಾನಗಳ ಸಮರ್ಪಕ ಬಳಕೆ ಕುರಿತು ವಿಶಿಷ್ಟ ಸಾಧನೆ ಮಾಡಿರುವ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯಿತಿಗೆ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ದೊರೆತ್ತಿದೆ. ಕರ್ನಾಟಕ ಸರಕಾರ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗಾಂಧಿ ಜಯಂತಿ ದಿನದಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ […]

ತ್ರಾಸಿ ಪಂಚಾಯತ್‍ಗೆ,ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪುರಸ್ಕಾರ-2023

ಕುಂದಾಪುರ:ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯಿತಿಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪುರಸ್ಕಾರ-2023 ರಾಜ್ಯ ಮಟ್ಟದ ಪ್ರಶಸ್ತಿ ದೊರೆತ್ತಿದೆ.ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಮತ್ತು ಪಿಡಿಒ ಶೋಭಾ ಎಸ್ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಮತ್ತು […]

ತ್ರಾಸಿ:ಬೀದಿ ನಾಟಕ ಪ್ರದರ್ಶನ,ಸ್ವಚ್ಛತಾ ಅಭಿಯಾನ

ಕುಂದಾಪುರ:ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ,ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ತ್ರಾಸಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಪರಿಸರ ಮತ್ತು ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ ಎನ್‍ಎಸ್‍ಎಸ್ ಸ್ವಯಂ ಸೇವಕರಿಂದ ತ್ರಾಸಿ ಬೀಚ್‍ನಲ್ಲಿ ಭಾನುವಾರ ನಡೆಯಿತು.ಈ ಸಂದರ್ಭ ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಅಧ್ಯಕ್ಷ ತಮಯ್ಯ ದೇವಾಡಿಗ,ಮರವಂತೆ ಅಧ್ಯಕ್ಷ ಲೋಕೇಶ್ ಖಾರ್ವಿ ಹಾಗೂ ಕುಂದಾಪುರ ಇಒ ಶಶಿಧರ ಕೆ.ಜಿ ಮತ್ತು ಬೈಂದೂರು […]

You cannot copy content of this page