ತಾಲೂಕು ಮಟ್ಟದ ಸಾಹಿತ್ಯಕ ಸ್ಪರ್ಧೆಗಳಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ

ಕುಂದಾಪುರ:ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸಾಹಿತ್ಯಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ವಿಭಾಗಗಳಲ್ಲಿ ಸಾಧನೆ ಮೆರೆದಿದ್ದಾರೆ.ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಪ್ರಥಮ ಸ್ಥಾನ,ರಸಪ್ರಶ್ನೆ(ಕ್ವಿಜ್) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ಗಿರೀಶ್ ಪೈ ಪ್ರಥಮ ಸ್ಥಾನ,ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಐಶ್ವರ್ಯ ವೈದ್ಯ ದ್ವಿತೀಯ ಸ್ಥಾನ,ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವೈಷ್ಣವಿ ದ್ವಿತೀಯ ಸ್ಥಾನ […]

ಅ.8 ರಿಂದ ಕೊಡಪಾಡಿ ಶ್ರೀ ಗುಹೇಶ್ವರ ದೇವಳದಲ್ಲಿ ಅಷ್ಟಮಂಗಳ ಪ್ರಶ್ನೆ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿ ಶ್ರೀಗುಹೇಶ್ವರ ದೇವಾಲಯದ ಜೀರ್ಣೊದ್ಧಾರ ಪ್ರಯುಕ್ತ ಹಮ್ಮಿಕೊಂಡಿದ್ದ ಅಷ್ಟಮಂಗಳ ಪ್ರಶ್ನೆ ಚಿಂತನಾ ಕಾರ್ಯಕ್ರಮ ಅ.7,8,9 ರಂದು ನಡೆಯುವುದೆಂದು ನಿಶ್ಚಯಿಸಲಾಗಿತ್ತು.ಅನಿವಾರ್ಯ ಕಾರಣದಿಂದ ಅಷ್ಟಮಂಗಳ ಪ್ರಶ್ನೆ ಕಾರ್ಯಕ್ರಮ ಅ.8,9 ಮತ್ತು 10 ರಂದು ಕೇರಳದ ಪ್ರಸಿದ್ಧ ದೈವಜ್ಞರಾದ ನಾರಾಯಣ ನಂಬೂದಿರಿ ಕೈಮುಕ್ಕು ಹಾಗೂ ಇತರ ದೈವಜ್ಞರ ಸಹಕಾರದಲ್ಲಿ ನಡೆಯಲಿದೆ ದೇವಾಲಯದ ಸಮಿತಿ ತಿಳಿಸಿದೆ.

ಮೊವಾಡಿ:ಬಾಲ ಭವನ ಉದ್ಘಾಟನಾ ಕಾರ್ಯಕ್ರಮ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಕೆನರಾ ಬ್ಯಾಂಕ್ ನೇತೃತ್ವದಲ್ಲಿ ಸುಮಾರು 3.5 ಲಕ್ಷ.ರೂ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸುಸಜ್ಜಿತವಾದ ನೂತನ ಬಾಲ ಭವನದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಅದ್ದೂರಿಯಾಗಿ ನಡೆಯಿತು. ಕೆನರಾ ಬ್ಯಾಂಕ್ ಮಣಿಪಾಲ ಸರ್ಕಲ್ ಡಿಜಿಎಂ ಶ್ರೀಜೀತ್ ಬಾಲವನ್ನು ಉದ್ಘಾಟಿಸಿ ಮಾತನಾಡಿ,ಶಾಲಾ ಮಕ್ಕಳ ಕಲಿಕಾ ಚಟುವಟಿಕೆಗೆ ಬಾಲ ಭವನ ಬಹಳಷ್ಟು ಸಹಕಾರಿ ಆಗಲಿದೆ ಶಾಲೆಯತ್ತಾ ಮಕ್ಕಳು ಧಾವಿಸಿ ಬರುವಂತೆ ಪೂರಕ ವಾತಾವರಣ ನಿರ್ಮಾಣವಾಗಿದ್ದು ಮಕ್ಕಳ ಮನಸಿಗೆ ಸಂತೋಷವನ್ನು ಉಂಟುಮಾಡಲಿದೆ ಎಂದು ಶುಭಹಾರೈಸಿದರು.ನಿವೃತ್ತ […]

You cannot copy content of this page