ಸಿಎಂ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ:ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು:ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ,ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ಉಡುಪಿ ಜಿಲ್ಲೆ ವ್ಯಾಪ್ತಿಯಲ್ಲಿನ ಮರಳು,ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರದ ಸಭೆ ತಿಂಗಳಿಗೊಮ್ಮೆ ನಡೆಯುವುದರಿಂದ ವಿಳಂಬವಾಗುತ್ತಿದೆ.ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯ ಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು. ಹೊಸ ಮರಳು ನೀತಿ […]























































































































































































































































































































































































































































































































































































































































































































































































































































































































































































































































































































































































































































































































































































































































































