ಹೆಮ್ಮಾಡಿ ಜನತಾ ಕಾಲೇಜಿನಲ್ಲಿ:ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ಜಯಂತಿ ಆಚರಣೆ

ಕುಂದಾಪುರ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ಪ್ರೌಢ ಶಾಲೆ ಅವರ ಜಂಟಿ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.ಕಾಲೇಜು ಹಾಗೂ ಪ್ರೌಢಶಾಲೆಯ ಸಿಬ್ಬಂದಿಗಳು ಗಾಂಧೀಜಿ ಹಾಗೂ ಶಾಸ್ತ್ರೀಯವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಗಾಂಧೀಜಿ ಹಾಗೂ ಶಾಸ್ತ್ರೀಯವರ ಜೀವನ ಹಾಗೂ ತತ್ವಾದರ್ಶಗಳ ಕುರಿತು ಮಾತನಾಡಿದರು.ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವರ ಅವರು ಸ್ವಾಗತಿಸಿ ವಂದಿಸಿದರು.ಕಾಲೇಜಿನ ಬೋಧಕ,ಬೋಧಕೇತರ ವೃಂದದವರು,ಪ್ರೌಢಶಾಲಾ ಶಿಕ್ಷಕ/ಶಿಕ್ಷಕೇತರ […]

ಗಂಗೊಳ್ಳಿ:ಶ್ರೀ ವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ:ಗಂಗೊಳ್ಳಿ-ಕುಂದಾಪುರ ನಡುವೆ ಸಂಪರ್ಕ ಸೇತುವೆ ನಿರ್ಮಾಣ ಶೀಘೃ ಆಗಬೇಕೆಂದು ಸೇತುವೆ ಹೋರಾಟ ಸಮಿತಿ ವತಿಯಿಂದ ಗಂಗೊಳ್ಳಿ ಶ್ರೀವೀರೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ಉಮಾನಾಥ ದೇವಾಡಿಗ ಮಾತನಾಡಿ,ಗಂಗೊಳ್ಳಿ ಜನತೆಯ ಬಹು ಕಾಲದ ಬೇಡಿಕೆ ಇನ್ನೂ ಕೂಡ ಕನಸಾಗಿಯೇ ಉಳಿದಿದೆ.ಗಂಗೊಳ್ಳಿ-ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿದರೆ ವ್ಯಾಪಾರ ವಹಿವಾಟುಗಳು ವೃದ್ಧಿ ಆಗುವುದ ಜತೆಗೆ ಗ್ರಾಮದ ಜನರಿಗೆ ಬಹಳಷ್ಟು ಅನುಕೂಲ ವಾಗಲಿದೆ ಎಂದರು.ಸೇತುವೆ ನಿರ್ಮಾಣ ಕಾರ್ಯದ ಬಗ್ಗೆ ಜನಪ್ರತಿನಿಧಿಗಳು […]

ಧನ್ವಿ ಮರವಂತೆಗೆ ಅಂತರಾಜ್ಯ ಯುವ ಪ್ರತಿಭಾ ಪ್ರಶಸ್ತಿ

ಬೈಂದೂರು:ಕಾಸರಗೋಡು ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ವಿಶಂತಿ ವರ್ಷಚಾರಣೆ ಅಂಗವಾಗಿ ನಡೆದ ಗ್ರಂಥಾಲಯ ಯುವ ಪ್ರತಿಭಾ ಪುರಸ್ಕಾರ ಭರವಸೆಯ ಬೆಳಕು 2023 ರ ಕಾರ್ಯಕ್ರಮದಲ್ಲಿ ಬಾಲ ಪ್ರತಿಭೆ ಧನ್ವಿ ಮರವಂತೆ ಅವರಿಗೆ ಅಂತರಾಜ್ಯ ಯುವ ಪ್ರತಿಭಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ತ್ರಾಸಿ ಡಾನ್ ಬೇಸ್ಕೊ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ.

You cannot copy content of this page