ಹೆಮ್ಮಾಡಿ:ಕೇದಾರ್ ಮರವಂತೆಗೆ ದ್ವಿತೀಯ ಸ್ಥಾನ

ಕುಂದಾಪುರ:ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ನೇತೃತ್ವದಲ್ಲಿ ನಡೆದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕೇದಾರ್ ಮರವಂತೆ ದ್ವಿತೀಯ ಸ್ಥಾನ ಪಡೆದಿದ್ದಾರೆ.ಅವರು ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ.

ಗಂಗೊಳ್ಳಿ:ಪೋಷಣ್ ಅಭಿಯಾನ,ಸೀಮಂತ ಕಾರ್ಯಕ್ರಮ

ಕುಂದಾಪುರ:ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಡುಪಿ,ಶೀಶು ಅಬಿವೃದ್ಧಿ ಯೋಜನೆ ಕುಂದಾಪುರ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ವತಿಯಿಂದ ಪೋಷಣ್ ಅಭಿಯಾನ ಮತ್ತು ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ದಾಕುಹಿತ್ಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಬಿ.ಎಸ್ ರತ್ನಾಕರ ಖಾರ್ವಿ,ಉಪಾಧ್ಯಕ್ಷ ಸಂಗೀತಾ ಸಂತೋಷ್ ಕೋಡಿಕಾರ್,ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಜಯಂತಿ ಖಾರ್ವಿ,ಮುಖ್ಯ ಶಿಕ್ಷಕಿ ಚಂದ್ರಕಲಾ,ಸಹ ಶಿಕ್ಷಕಿ ಪ್ರೇಮಲತಾ,ಗೌರವ ಶಿಕ್ಷಕಿ ಪಲ್ಲವಿ,ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್,ಸಹಾಯಕಿ ಗೌರಿ ಖಾರ್ವಿ,ಅಡುಗೆ ಸಹಾಯಕಿ ಗುಲಾಬಿ,ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅರವಿಂದ ಪೂಜಾರಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬೈಂದೂರು ವಿಧಾನಸಭೆ ಕ್ಷೇತ್ರದ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಅರವಿಂದ ಪೂಜಾರಿ ಪಡುಕೋಣೆ ಅವರನ್ನು ಆಯ್ಕೆ ಮಾಡಿ ಕೆಪಿಪಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ನೀಡಿದ್ದಾರೆ.ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಅರವಿಂದ ಪೂಜಾರಿ ಅವರು ಈ ಹಿಂದೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯವನ್ನು ನಿರ್ವಹಿಸಿದ್ದರು.

You cannot copy content of this page