ತ್ರಾಸಿ ಪಂಚಾಯತ್‍ಗೆ,ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪುರಸ್ಕಾರ-2023
ಕುಂದಾಪುರ:ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯಿತಿಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಪುರಸ್ಕಾರ-2023 ರಾಜ್ಯ ಮಟ್ಟದ ಪ್ರಶಸ್ತಿ ದೊರೆತ್ತಿದೆ.ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಮತ್ತು ಪಿಡಿಒ ಶೋಭಾ ಎಸ್ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಮತ್ತು […]























































































































































































































































































































































































































































































































































































































































































































































































































































































































































































































































































































































































































































































































































































































































































