ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ.

ಕುಂದಾಪುರ:ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ,ಬಾಲಕರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ,ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ರುಪಿನ್,ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಜ್ವಲ್ ಜಿ.,ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಸಂಜನಾ ಕಟ್ಟೆ,ಮತ್ತು ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ರಾಜ್ಯ ಮಟ್ಟದ ಸ್ಪರ್ಧೆಗೆ […]

ಹೆಮ್ಮಾಡಿ:ಕೇದಾರ್ ಮರವಂತೆಗೆ ದ್ವಿತೀಯ ಸ್ಥಾನ

ಕುಂದಾಪುರ:ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ನೇತೃತ್ವದಲ್ಲಿ ನಡೆದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕೇದಾರ್ ಮರವಂತೆ ದ್ವಿತೀಯ ಸ್ಥಾನ ಪಡೆದಿದ್ದಾರೆ.ಅವರು ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ.

ಗಂಗೊಳ್ಳಿ:ಪೋಷಣ್ ಅಭಿಯಾನ,ಸೀಮಂತ ಕಾರ್ಯಕ್ರಮ

ಕುಂದಾಪುರ:ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಡುಪಿ,ಶೀಶು ಅಬಿವೃದ್ಧಿ ಯೋಜನೆ ಕುಂದಾಪುರ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ವತಿಯಿಂದ ಪೋಷಣ್ ಅಭಿಯಾನ ಮತ್ತು ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ದಾಕುಹಿತ್ಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಬಿ.ಎಸ್ ರತ್ನಾಕರ ಖಾರ್ವಿ,ಉಪಾಧ್ಯಕ್ಷ ಸಂಗೀತಾ ಸಂತೋಷ್ ಕೋಡಿಕಾರ್,ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಜಯಂತಿ ಖಾರ್ವಿ,ಮುಖ್ಯ ಶಿಕ್ಷಕಿ ಚಂದ್ರಕಲಾ,ಸಹ ಶಿಕ್ಷಕಿ ಪ್ರೇಮಲತಾ,ಗೌರವ ಶಿಕ್ಷಕಿ ಪಲ್ಲವಿ,ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್,ಸಹಾಯಕಿ ಗೌರಿ ಖಾರ್ವಿ,ಅಡುಗೆ ಸಹಾಯಕಿ ಗುಲಾಬಿ,ಮಕ್ಕಳ ಪೋಷಕರು ಉಪಸ್ಥಿತರಿದ್ದರು.

You cannot copy content of this page