ಶ್ರೀಗಣೇಶ ಕ್ರೆಡಿಟ್ ಸೊಸೈಟಿ ವಾರ್ಷಿಕ ಸಾಮಾನ್ಯ ಸಭೆ;10% ಡಿವಿಡೆಂಟ್ ಘೋಷಣೆ
(ನಾಲ್ಕು ಜನ ಪ್ರಗತಿಪರ ಕೃಷಿಕರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು) ಕುಂದಾಪುರ:ಗ್ರಾಮೀಣ ಪ್ರದೇಶದ ಸ್ತ್ರೀ ಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸಂಘವು ಕಳೆದ ಏಳು ವರ್ಷಗಳಿಂದ ಕೆಲಸವನ್ನು ಮಾಡಿಕೊಂಡು ಬರುತ್ತಿದೆ.ಸಂಘದ ಸದಸ್ಯರಿಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮತ್ತು ಅಗತ್ಯ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ.ಸದಸ್ಯರು ಆಡಳಿತ ಮಂಡಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ಕಾಲ ಕಾಲಕ್ಕೆ ನೀಡುವುದರ ಮುಖೇನ ಸಂಘದ ಬೆಳವಣಿಗೆಗೆ ಸಹಕರಿಸಬೇಕೆಂದು ಶ್ರೀಗಣೇಶ ಸೊಸೈಟಿ ಅಧ್ಯಕ್ಷ ಮುರಳೀಧರ ಐತಾಳ್ ಹೇಳಿದರು.ಹೊಸಾಡು ಸ.ಹಿ.ಪ್ರಾ ಶಾಲೆಯಲ್ಲಿ ಭಾನುವಾರ […]