ಲಂಚ ಸ್ವೀಕರಿಸುತ್ತಿದ್ದಾಗಲೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಂಚಾಯಿತಿ ಅಧಿಕಾರಿಗಳು
ಗಂಗೊಳ್ಳಿ:ವ್ಯಕ್ತಿಯೊಬ್ಬರಿಂದ ಲಂಚವನ್ನು ಸ್ವೀಕರಿಸುತ್ತಿದ್ದ ಸಮಯದಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಲೆಕ್ಕಪರಿಶೋಧಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ಬುಧವಾರ ನಡೆದಿದೆ.ಆರೋಪಿತರಾದ ಗಂಗೊಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಹೆಚ್ ಹಾಗೂ ಎಸ್‍ಡಿಎ ಸಿಬ್ಬಂದಿ ಶೇಖರ್.ಜಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ದಸ್ತಗಿರಿ ಮಾಡಿದ್ದಾರೆ.ಪಂಚಾಯಿತಿ ಮೇಲೆ ನಡೆದ ಲೋಕಾಯುಕ್ತ ದಾಳಿಯಿಂದ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.ಗಂಗೊಳ್ಳಿ ಗ್ರಾಮದ ನಿವಾಸಿ ಮೊಹಮ್ಮದ್ ಹನೀಫ್ ಅವರು ಸರ್ವೇ ನಂಬರ್ 108/13 […]





























































































































































































































































































































































































































































































































































































































































































































































































































































































































































































































































































































































































































































































































































































































































































