ರಾಮ ಮಂದಿರ ಉದ್ಘಾಟನೆಗೆ ಮೂಹೂರ್ತ ಫಿಕ್ಸ್,ಜನವರಿ ತಿಂಗಳಲ್ಲಿ ಉದ್ಘಾಟನೆ ಸಾಧ್ಯತೆ
ಬೆಂಗಳೂರು:ಹಿಂದೂಗಳ ಕನಸಾದ ಅಯ್ಯೋಧ್ಯ ಶ್ರೀರಾಮ ದೇವರ ಮಂದಿರ ನಿರ್ಮಾಣಕ್ಕೆ ಮೂಹೂರ್ತ ಫಿಕ್ಸ್ ಆಗಿದ್ದು ಮುಂದಿನ ವರ್ಷ ಜನವರಿ 22 ರಂದು ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.ಅಯೋಧ್ಯೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ, ರಾಮ್ ಲಲ್ಲಾ ಅವರನ್ನ ಜನವರಿ 22, 2024ರಂದು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯವನ್ನು ಉದ್ಘಾಟಿಸಲಿದ್ದಾರೆ ಎಂದು ಸಭೆಯಲ್ಲಿ ನಿರ್ಣಯಿಸಲಾಗಿದ್ದು. ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ನಡೆಯುತ್ತಿರುವ ಸಭೆಯಲ್ಲಿ […]