ಬಿಜೆಪಿ ಪಕ್ಷದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ,ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

ಕುಂದಾಪುರ:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದರು.ಬಿಜೆಪಿ ಪಕ್ಷದ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಅವರು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿರುವುದು ಕರಾವಳಿ ಭಾಗದಲ್ಲಿ ತೀವೃ ಕುತೂಹಲ ಮೂಡಿಸಿದೆ.2023 ರ ವಿಧಾನ ಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ […]

ಶಿಕ್ಷಕಿ ಸೀತಾ ಜೋಗಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಕುಂದಾಪುರ:ಬೈಂದೂರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮರವಂತೆ (ಪೂರ್ವ) ಶಿಕ್ಷಕಿ ಸೀತಾ ಜೋಗಿ ಅವರಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಶ್ರೀಗೋಪಾಲಕೃಷ್ಣ ದೇವಸ್ಥಾನ ಅರಾಟೆ

ಕುಂದಾಪುರ:ಹೊಸಾಡು ಗ್ರಾಮದ ಅರಾಟೆ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ನಡೆಯಿತು.ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಗೋಪಾಲ ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆಯನ್ನು ಸಮರ್ಪಿಸಲಾಯಿತು.ಗ್ರಾಮಸ್ಥರು,ಅರ್ಚಕವೃಂದದವರು ಉಪಸ್ಥಿತರರಿದ್ದರು.

You cannot copy content of this page