ಪಾದಾಚಾರಿಗೆ ಬೈಕ್ ಡಿಕ್ಕಿ:ಮೂವರಿಗೆ ಗಾಯ

ಕುಂದಾಪುರ:ಹೆಮ್ಮಾಡಿ ಯಿಂದ ತಲ್ಲೂರು ಕಡೆಗೆ ಸಾಗುತ್ತಿದ್ದ ಬೈಕ್ ಜಾಲಾಡಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಕೊಲ್ಲೂರು ದುರ್ಗಾ ಲಾಡ್ಜ್ ಓನರ್ ಮಂಜುನಾಥ ಭಟ್ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೈಕ್ ಸವಾರರಾದ ರೋಹಿತ್ ಮತ್ತು ಅಪ್ಪಯ್ಯ ಸ್ವಾಮಿ ಮಾಲಾಧಾರಿ ದಕ್ಷ ಎನ್ನುವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದರು.ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು ಸಹಕರಿಸಿದರು.

ಗ್ಯಾಸ್ ತುಂಬಿದ ಪಿಕಪ್ ಗಾಡಿಗೆ ಬೈಕ್ ಡಿಕ್ಕಿ:ಬೈಕ್ ಸವಾರ ಸ್ಥಳದಲ್ಲೆ ಸಾವು

ಕುಂದಾಪುರ:ಗೋವಾ ದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಬೈಕ್‍ಗೆ ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಸಾಗುತ್ತಿದ್ದ ಗ್ಯಾಸ್ ತುಂಬಿದ ಪಿಕಪ್ ಗಾಡಿ ಕುಂದಾಪುರ ತಾಲೂಕಿನ ಅರಾಟೆ ಸೇತುವೆ ಡಿವೈಡರ್ ಬಳಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಂಗಳೂರು ಮೂಲದ ನಿವಾಸಿ ರಂಜಿತ್ ಬಲ್ಲಾಳ್ (59) ಸ್ಥಳದಲ್ಲೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಮತ್ತು ಅಬ್ರಾರ್ ಮೃತ ದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು […]

ನವಚೇತನ ಸಮಾವೇಶ,ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ನವಚೇತನ ಸಮಾವೇಶ ಅದ್ದೂರಿಯಾಗಿ ಅಂಬೇಡ್ಕರ್ ಭವನ ಕುಂದಾಪುರದಲ್ಲಿ ಸೋಮವಾರ ನಡೆಯಿತು.ಕುಂದಾಪುರ ಶಾಸ್ತ್ರೀ ಸರ್ಕಲ್ ನಿಂದ ಅಂಬೇಡ್ಕರ್ ಭವನದ ವರೆಗೆ ಬೃಹತ್ ಮೆರವಣಿಗೆ ನಡೆಯಿತು.ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋಧಿಸಿದರು.ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಅವರು ನವಚೇತನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ,ಈಗಾಗಲೇ ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು […]

You cannot copy content of this page