ಭಾರತೀಯರಿಗೆ ಪ್ರಜ್ಞಾನಂದ ವಿಶ್ವ ಚಾಂಪಿಯನ್:ರನ್ನರ್ ಅಪ್ ಪ್ರಶಸ್ತಿಗೆ ಅಪ್ಪುಗೆ

ಬೆಂಗಳೂರು:ಚೆಸ್ ವಿಶ್ವಕಪ್ ಚಾಂಪಿಯನ್ ಶಿಪ್‍ನಲ್ಲಿ ಭಾರತೀಯ ಯುವ ತಾರೆ 18 ವರ್ಷದ ಪ್ರಜ್ಞಾನಂದ ಅವರು ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‍ಸೆನ್ ಅವರೊಂದಿಗೆ ಆಡಿದ ರಣರೋಚಕ ಫೈನಲ್ ಪಂದ್ಯಾಟದಲ್ಲಿ ಸೋಲುದರ ಮುಖೇನ ರನ್ನರ್ ಅಪ್ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.ಚೆಸ್ ವಿಶ್ವಕಪ್ ಪಂದ್ಯಾಟದಲ್ಲಿ ಘಟಾನುಗಟಿ ಆಟಗಾರರಿಗೆ ಸೋಲಿನ ಅನುಭವದ ರುಚಿ ತೋರಿಸಿದ ಭಾರತದ ಯುವ ಚೆಸ್ ಆಟಗಾರ ಫೈನಲ್‍ಗೆ ಎಂಟ್ರಿ ಕೊಡುವುದರ ಮುಖೇನ ಭಾರತೀಯರ ನಿದ್ದೆಗೆಡಿಸಿದ್ದರು.ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‍ಸೆನ್ ಅವರ ಜತೆ ಆಡಿದ ಫೈನಲ್ ಪಂದ್ಯದಲ್ಲಿ ರೋಚಕ […]

ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ದೇವಾಡಿಗರಿಗೆ ಅಭಿನಂದನೆ

ಕುಂದಾಪುರ:ಆಲೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ರಾಜೇಶ್.ಎನ್ ದೇವಾಡಿಗ ಅವರನ್ನು ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಿ ಸಂಘದ ಕಛೇರಿಯಲ್ಲಿ ಗುರುವಾರ ಸನ್ಮಾನಿಸಲಾಯಿತು.ಸಂಘದ ಅಧ್ಯಕ್ಷ ಮಂಜಯ್ಯ ಶೆಟ್ಟಿ ಹರ್ಕೂರು,ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವರಾಮ ಯಡ್ತರೆ,ವ್ಯವಸ್ಥಾಪಕ ಸಂಜೀವ ಪೂಜಾರಿ ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

ಮೂರ್ತೆದಾರರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ವಾರ್ಷಿಕ ಮಹಾಸಭೆ:ಶೇ.10 ಡಿವಿಡೆಂಡ್ ಘೋಷಣೆ

ಕುಂದಾಪುರ:ಮೂರ್ತೆದಾರರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಅದರ 32ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸಂಘದ ತಲ್ಲೂರು ಮೂರ್ತೆದಾರರ ಸಭಾಭವನದಲ್ಲಿ ಬುಧವಾರ ನಡೆಯಿತು.ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಉದಯ ಪೂಜಾರಿ ಬಡಾಕೆರೆ ಸಭೆಯನ್ನುದ್ದೇಶಿಸಿ ಮಾತನಾಡಿ ಸಂಘವು ಎ ದರ್ಜೆಯ ಆಡಿಟ್ ವರ್ಗೀಕರಣ ಹೊಂದಿದ್ದು ವರದಿ ವರ್ಷದಲ್ಲಿ ರೂ.93,75,152.57 ನಿವ್ವಳ ಲಾಭ ಗಳಿಸಿದೆ.ಈ ಸಾಲಿನಲ್ಲಿ ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡುವುದಾಗಿ ಘೋಷಣೆ ಮಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಪೂಜಾರಿ ವರದಿ ಮಂಡಿಸಿ […]

You cannot copy content of this page