ಗಂಗೊಳ್ಳಿ ಗ್ರಾಮ ಪಂಚಾಯತ್:ಗೃಹ ಲಕ್ಷ್ಮೀ ಕಾರ್ಯಕ್ರಮ ವೀಕ್ಷಣೆ

ಕುಂದಾಪುರ:ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗೃಹ ಲಕ್ಷ್ಮೀ ಯೋಜನೆಯ ಲೈವ್ ವೀಕ್ಷಣೆ ಕಾರ್ಯಕ್ರಮ ಗಂಗೊಳ್ಳಿ ರಾಮ ಮಂದಿರದಲ್ಲಿ ನಡೆಯಿತು.ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಪಂಚಾಯತ್ ವತಿಯಿಂದ ಅರಿಶಿನ ಕುಂಕುಮ,ಹೂ ನೀಡಿ ಸ್ವಾಗತಿಸಿಕೊಳ್ಳಲಾಯಿತು.ನೂರಾರು ಫಲಾನುಭವಿಗಳು ಭಾಗವಹಿಸಿದ್ದರು.ಗಂಗೊಳ್ಳಿ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ,ಉಪಾಧ್ಯಕ್ಷೆ ಪ್ರೇಮಾ ಸಿ ಪೂಜಾರಿ ಮತ್ತು ಸದಸ್ಯರು ಹಾಗೂ ಸಿಬ್ಬಂದಿಗಳು,ನೋಡಲ್ ಅಧಿಕಾರಿ ರಾಜುಕುಮಾರ್ ಉಪಸ್ಥಿತರಿದ್ದರು.ಗಂಗೊಳ್ಳಿ ಗ್ರಾಮ ಪಂಚಾಯತ್ ಒಂದರಲ್ಲೆ ಸುಮಾರು 3500 ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗೆ ಹೆಸರನ್ನು ನೋಂದಾವಣೆ ಮಾಡಿಕೊಂಡಿದ್ದಾರೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ:ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ

ಕುಂದಾಪುರ:ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ತ್ರಿಷಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರೀತಮ್ 40 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮನ್ ಕೆ.ಎಸ್ 58 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಿನ್ಸಿಪಾಲ್,ಬೋಧಕ,ಬೋಧಕೇತರ ವೃಂದದವರು ಅಭಿನಂದನೆ […]

ಹೊಸಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಉದ್ಘಾಟನೆ

ಕುಂದಾಪುರ:ಕರ್ನಾಟಕ ಸರಕಾರ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯದ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಹೊಸಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು.ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಪ್ರತಿಭಾ ಕಾರಂಜಿ ಅಂತಹ ಸ್ಪರ್ಧೆಗಳು ಉತ್ತಮವಾದ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.ಪಾಠದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದಾಗ […]

You cannot copy content of this page