ಅಂಪಾರು ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ಸಂಪನ್ನ
ಕುಂದಾಪುರ:ತಾಲೂಕು ಅಂಪಾರು ಗ್ರಾಮದ ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆಯಿತುಶ್ರೀ ದೇವರಿಗೆ ಬೆಳಿಗ್ಗೆ ಗುರುಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ, ಸಮಾರಾಧನೆ, ಕೃಚ್ಚಾಚರಣೆ, ಮಹಾಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ಪ್ರಾಯಶ್ಚಿತ್ತ ಅಯುತ ಸಂಖ್ಯಾತಿಲಹೋಮ, ಕೂಷ್ಮಾಂಡ ಹೋಮ, ಪವಮಾನ ಹೋಮ, ತತ್ವ ಕಲಶ ಸ್ಥಾಪನೆ, ತತ್ವಹೋಮ, ಸರ್ಪಸೂಕ್ತ ಹೋಮ, ಸುಬ್ರಹ್ಮಣ್ಯ ಹೋಮ, ಪಂಚವಿಂಶತಿ ದ್ರವ್ಯ ಕಲಶಸ್ಥಾಪನೆ, ಪ್ರಧಾನ ಅಧಿವಾಸ ಹೋಮ, ಗಾಯತ್ರಿ ಕಲಶ ಸ್ಥಾಪನೆ, ಗಾಯತ್ರಿ ಜಪ, […]