ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಮಹಿಳೆ

ಕುಂದಾಪುರ:ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಹೋದ ಪೊಲೀಸರ ಮೇಲೆ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಹಲ್ಲೆ ನಡೆಸಲು ಯತ್ನಿಸಿದ ಘಟನೆ ಕೋಟೇಶ್ವರದಲ್ಲಿ ಮಂಗಳವಾರ ನಡೆದಿದೆ.ಸಾರ್ವಜನಿಕರಿಗೆ ಸಮಸ್ಯೆಯಾಗುವ ರೀತಿಯಲ್ಲಿ ರಸ್ತೆಯ ಮೇಲೆ ವ್ಯವಹಾರ ನಡೆಸುತ್ತಿದ್ದಾರೆ ಎಂದು ಸ್ಥಳೀಯ ವಾಹನ ಸವಾರರ ದೂರಿನ ಮೇರೆಗೆ ಸ್ಥಳಕ್ಕೆ ವಿಚಾರಣೆಗೆ ಬಂದ ಪೊಲೀಸರ ಮೇಲೆ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದ ಮಹಿಳೆ ಸೀಮೆ ಎಣ್ಣೆ ಸುರಿದು ಬೆಂಕಿ ಸೂಡಿ ಯಿಂದ ಹಲ್ಲೆಗೆ ಯತ್ನಿಸಿದ್ದಾರೆ.ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಥಬೀದಿ ಶಾಲೆಗೆ ಪ್ರಿಂಟರ್ ಕೊಡುಗೆ

ಕುಂದಾಪುರ:ಗಂಗೊಳ್ಳಿ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕೆ.ತಿಮ್ಮಪ್ಪ ಖಾರ್ವಿ ಅವರು ಸುಮಾರು 15 ಸಾವಿರ.ರೂ. ಮೌಲ್ಯದ ಪ್ರಿಂಟರ್‍ನ್ನು ಕೊಡುಗೆಯಾಗಿ ನೀಡಿದರು.ಮುಖ್ಯ ಶಿಕ್ಷಕಿ ಚಂದ್ರಕಲಾ, ಗಂಗೊಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ,ಎಸ್‍ಡಿಎಂಸಿ ಅಧ್ಯಕ್ಷ ರತ್ನಾಕರ ಖಾರ್ವಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಾನಂದ ಪೂಜಾರಿ,ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್,ಶಿಕ್ಷಕರು, ಎಸ್‍ಡಿಎಂಸಿ ಸದಸ್ಯರು,ಉಪಸ್ಥಿತರಿದ್ದರು.

ಆಲೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ ಆಯ್ಕೆ

ಕುಂದಾಪುರ:ಆಲೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಪಂಚಾಯತ್ ಸದಸ್ಯರಾದ ರಾಜೇಶ್ ಎನ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಸಿಂಗಾರಿ ತಾರಿಬೇರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಆಲೂರು ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಪಕ್ಷದ 08 ಸದಸ್ಯರು ಹಾಗೂ ಬಿಜೆಪಿ ಪಕ್ಷದ 06 ಸದಸ್ಯರು ಸೇರಿ ಒಟ್ಟು 14 ಸದಸ್ಯರಿದ್ದಾರೆ.ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರು ತಟಸ್ಥವಾದ ಧೋರಣೆಯನ್ನು ತಳೆದಿದ್ದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡರು.

You cannot copy content of this page