ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್,ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ-ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು:ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು,ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜಕಾರಣಿಗಳು ಕಾನೂನು ಹಾಗೂ ನೀತಿಗಳನ್ನು ನಿರೂಪಿಸಿದರೆ,ಅವುಗಳನ್ನು ಜಾರಿಗೊಳಿಸುವುದು ಅಧಿಕಾರಿಗಳು.ಜನರು ಮತ್ತು ಅಧಿಕಾರಿಗಳು ಸರ್ಕಾರದ […]