ಹೊಸಾಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಸಾಮಾನ್ಯ ಸಭೆ
ಕುಂದಾಪುರ:ಇಂದಿನ ಜೀವನ ಶೈಲಿ ಮತ್ತು ದೈನಂದಿನ ಚಟುವಟಿಕೆಗಳಲ್ಲಿ ಎದುರಾಗುತ್ತಿರುವ ಹಲವಾರು ಸವಾಲುಗಳ ನಡುವೆ ಹೈನುಗಾರಿಕೆಯಲ್ಲಿ ತೊಡಗಿಕೊಂಡು ಗ್ರಾಮೀಣ ಭಾಗದ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿರುವುದರಿಂದ ಅವರ ಜೀವನ ಮಟ್ಟ ಸುಧಾರಣೆ ಜತೆಗೆ ಕುಟುಂಬ ನಿರ್ವಹಣೆ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದ್ದಾರೆ ಎಂದು ವಿಸ್ತಾರಣಾಧಿಕಾರಿ ವಾಸುದೇವ ಪುರಾಣಿಕ್ ಹೇಳಿದರು.ಹೊಸಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಹೊಸಾಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಹೊಸಾಡು ಅದರ 2022-2023 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ […]