ಮಿಷನ್ ಇಂದ್ರ ಧನುಷ್ 5.0 ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ
ಉಡುಪಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮ ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಅವರು ಮಿಷನ್ ಇಂದ್ರ ಧನುಷ್ 5.0 ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,ಮಕ್ಕಳನ್ನು ಮತ್ತು ಗರ್ಭಿಣಿಯನ್ನು ಕಾಡುವ ಅನೇಕ ಕಾಯಿಲೆಗಳಿಗೆ ಮಿಷನ್ ಇಂದ್ರ ಧನುಷ್ ಅಭಿಯಾನದಲ್ಲಿ ನೀಡುವ ಲಸಿಕೆಗಳು ಪರಿಣಾಮಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ನೀಡಿ,ರೋಗಗಳು ಬಾರದಂತೆ […]