ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು ಸಹೋದರ,ಇಬ್ಬರು ಸಹೋದರಿ ಇದ್ದಾರೆ.ಕುಂದಾಬಾರಂದಾಡಿ ಹಕ್ಲಾಡಿ,ಹೊಸಾಡು ಮುಳ್ಳಿಕಟ್ಟೆಯಲ್ಲಿ ಸೇವೆಯನ್ನು ಸಲ್ಲಿಸಿರುವ ಡಾ.ಶ್ರೀನಿವಾಸ ಪೈ ಗಿಡಮೂಲಿಕೆ ವೈದ್ಯರೆಂದು ಪ್ರಸಿದ್ಧಿ ಪಡೆದಿದ್ದರು.10 ರೂಪಾಯಿಗೆ ಔಷಧವನ್ನು ನೀಡುತ್ತಿದ್ದ ಅವರು ಬಡವರ ಪಾಲಿನ ವೈದ್ಯರೆಂದು ಖ್ಯಾತಿ ಹೊಂದಿದ್ದರು.

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ನೇರ ಪ್ರಸಾರ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಜೂನ್.16 ರಂದು ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಜೆ

ಕುಂದಾಪುರ:ಉಡುಪಿ ಜಿಲ್ಲೆಯಾದ್ಯಂತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಜೂ. 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶಿಸಿದ್ದಾರೆ.

You cannot copy content of this page