ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ

ಕುಂದಾಪುರ:ಬೈಂದೂರುನಲ್ಲಿರುವ ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗಗಳ ಸರಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಾಸ್ಟೆಲ್‍ನಲ್ಲಿ ಸ್ವಚ್ಛತೆ ಮತ್ತು ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಉಪಸ್ಥಿತರಿದ್ದರು.

ಅಕ್ರಮವಾಗಿ ಸಾಗಿಸುತ್ತಿದ್ದ ಕೆಂಪು ಕಲ್ಲು ಸಹಿತ,ಲಾರಿ ವಶಕ್ಕೆ

ಕುಂದಪುರ:ಯಾವುದೇ ರೀತಿಯ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲನ್ನು ಸಾಗಿಸುತ್ತಿದ್ದ ಲಾರಿಯನ್ನು ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.ಗಂಗೊಳ್ಳಿ ಪೆÇಲೀಸ್ ಠಾಣೆಯ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದ ಸಂದರ್ಭ ಕೆಂಪು ಕಲ್ಲನ್ನು ತುಂಬಿಕೊಂಡು ಮುಳ್ಳಿಕಟ್ಟೆ ಕಡೆಗೆ ಸಾಗಿ ಬರುತ್ತಿದ್ದ ಕಲ್ಲಿನ ಲಾರಿಯನ್ನು ತಪಾಸಣೆ ನಡೆಸಿ ಪರಿಶೀಲಿಸಿದಾಗ,ಯಾವುದೇ ರೀತಿ ಪರಾವಾನಿಗೆ ಇಲ್ಲದೆ ಕೆಂಪು ಕಲ್ಲನ್ನು ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಗಂಟಿಹೊಳೆ ಭೇಟಿ

ಕುಂದಾಪುರ:ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಆಸ್ಪತ್ರೆಯ ವೈದ್ಯಾಧಿಕಾರಿ ಜತೆ ಚರ್ಚೆಸಿ ಮಾತುಕತೆ ನಡೆಸಿದರು.ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದ್ದರು ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುವಲ್ಲಿ ವೈದ್ಯಾಧಿಕಾರಿಗಳು ಸಹಿತ ಸಿಬ್ಬಂದಿಗಳು ನಿರ್ಲಕ್ಷ್ಯ ತೋರುತ್ತಿದ್ದುದರ ಬಗ್ಗೆ ಮಾಹಿತಿ ಪಡೆದು ತರಾಟೆಗೆ ತೆಗೆದುಕೊಂಡರು.ಕರ್ತವ್ಯ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಮತ್ತೆ ಇದೇ ರೀತಿ ಮುಂದುವರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ […]

You cannot copy content of this page