ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ

ಬೆಂಗಳೂರು:ಸ್ಯಾಂಡಲ್‍ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಅವರು ಪತಿ ಮತ್ತು ಓರ್ವ ಮಗ,ಬಂಧು ಬಳಗವನ್ನು ಅಗಲಿದ್ದಾರೆ.ಪತಿ ವಿಜಯ್ ರಾಘವೇಂದ್ರ ಜತೆ ಸ್ಪಂದನಾ ಅವರು ಬ್ಯಾಂಕಾಕ್‍ಗೆ ತೆರಳಿದ್ದರು,ಅಲ್ಲಿ ಅವರಿಗೆ ಕಾಣಿಸಿಕೊಂಡಿದ್ದ ತೀವೃ ತರಹದ ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿ ಆಗದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.2016 ರಲ್ಲಿ ಬಿಡುಗಡೆ ಆಗಿದ್ದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟನೆಯನ್ನು ಮಾಡಿದ್ದರು.ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಮ್ ಅವರ ಅಕ್ಕ.

ಇಂಗು ಗುಂಡಿಗೆ ಬಿದ್ದು ಬಾಲಕ ಮೃತ್ಯು

ಮೂಡಿಗೆರೆ:ಆಟ ಆಡುತ್ತಿದ್ದಾಗ ಆಕಸ್ಮಿಕವಾಗಿ ಇಂಗು ಗುಂಡಿಗೆ ಬಿದ್ದು ಅಶರ್ ಡಿ ಗುನ್ನಾ (8) ಎನ್ನುವ ಬಾಲಕನೊರ್ವ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಎಂಬಲ್ಲಿ ನಡೆದಿದೆ.ಹೊಸದಾಗಿ ನಿರ್ಮಾಣವಾಗುತ್ತಿದ್ದ ಶಾಲೆಯೊಂದರ ಕಟ್ಟಡ ನಿರ್ಮಾಣದ ಕೆಲಸಕ್ಕಾಗಿ ಬಳಸಿಕೊಳ್ಳುತ್ತಿರುವ ಇಂಗು ಗುಂಡಿಗೆ ಬಾಲಕನು ಬಿದ್ದು ಈ ದುರ್ಘಟನೆ ಸಂಭವಿಸಿದೆ.ತೆರೆದ ಜಾಗದಲ್ಲಿ ಇಂಗು ಗುಂಡಿ ತೆಗೆದು ರಕ್ಷಣಾಬೇಲಿ ನಿರ್ಮಿಸದೆ ಇದ್ದಿದ್ದರಿಂದ ಇವೊಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

ಕುಂದಾಪುರ:ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24 ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರು-ಶಿಕ್ಷಕರ ಸಭೆ ನಡೆಯಿತು.ಸಭೆ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಮೊಗವೀರ ಮಾತನಾಡಿ,ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ ಬದಲಾದ ಪರೀಕ್ಷಾ ಪದ್ದತಿ ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಕುರಿತು ವಿವರಿಸಿದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಉಡುಪಿ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಸಿ.ಎ ಗೋಪಾಲಕೃಷ್ಣ ಭಟ್ ಮಾತನಾಡಿ,ಸ್ಪರ್ಧಾತ್ಮಕ ಯುಗದಲ್ಲಿ ಸಿ.ಎ/ಸಿ.ಎಸ್ ನಂತಹ ಕೋರ್ಸ್‍ಗಳು ಬಹಳಷ್ಟು […]

You cannot copy content of this page