ಮಣಿಪಾಲ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ಮಗು ಶಿಫ್ಟ್: ಈಶ್ವರ ಮಲ್ಪೆ ಸಾಧನೆಗೆ ಜನರ ಮೆಚ್ಚುಗೆ
ಉಡುಪಿ:ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ತುರ್ತಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕಾಗಿದ್ದರಿಂದ ಆಪತ್ಭಾಂದವ ಈಶ್ವರ್ ಮಲ್ಪೆ ಅವರು ತಮ್ಮ ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ಸಮಯಕ್ಕೆ ಸರಿಯಾಗಿ ತಲುಪಿಸುವುದರ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ತೀವ್ರ ಸ್ವರೂಪದ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೋಷಕರು ತುರ್ತಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಬೇಕಾಗಿತ್ತು.ಖಾಸಗಿ ಆಂಬ್ಯುಲೆನ್ಸ್ ಅವರ ಬಳಿ ಕೇಳಿಕೊಂಡಾಗ ಪ್ರಯಾಣ ವೆಚ್ಚ 28,000.ರೂ ತಗಲುದೆಂದು ಸೂಚಿಸಿದರು.ಆರ್ಥಿಕ […]