ಶ್ರೀ ಧರ್ಮಸ್ಥಳ ಮೇಳ ಯಕ್ಷಗಾನ ಬಯಲಾಟ ಸೇವೆ,ಭವ್ಯ ಮೆರವಣಿಗೆ

ಕುಂದಾಪುರ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಕಾರುಣ್ಯಾಂಬುಧಿ ಶ್ರೀ ರಾಮ ಎಂಬ ಯಕ್ಷಗಾನ ಬಯಲಾಟ ಕಾರ್ಯಕ್ರಮ ಗೀತಾ ಗೋಕುಲ ಜಿ ಶೆಟ್ಟಿ ಉಪ್ಪುಂದ ಶಾಲೆಬಾಗಿಲು ಅವರ ಮೆನೆಯ ವಠಾರದಲ್ಲಿ ಸೋಮವಾರ ನಡೆಯಿತು.ಉಪ್ಪುಂದ ವೆಂಕಟರಮಣ ದೇವಸ್ಥಾನದಿಂದ ಭವ್ಯ ಮೆರವಣಿಗೆ ಮೂಲಕ ಗಣಪತಿ ದೇವರನ್ನು ಭವ್ಯ ಮೆರವಣಿಗೆ ಮೂಲಕ ಚೌಕಿಗೆ ಕರೆತರಲಾಯಿತು.ಚಂಡೆ ವಾದನ ಕುಣಿತ ಭಜನೆ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತು.ಧಾರ್ಮಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೆ ರೀತಿಯ ಸೇವೆಯನ್ನು ಸಲ್ಲಿಸುತ್ತಿರುವ ಉದ್ಯಮಿ ಗೀತಾ ಗೋಕುಲ ಜಿ […]

ಸಮುದ್ರದಲ್ಲಿ ನಾಪತ್ತೆ ಯಾಗಿರುವ ಮೀನುಗಾರನ ಪತ್ತೆಗೆ ತೀವೃವಾದ ಹುಡುಕಾಟ

ಕುಂದಾಪುರ:ಸರ್ವಮಂಗಲೇ ಮೀನುಗಾರಿಕಾ ಪರ್ಷಿನ್ ಬೋಟ್‍ನಲ್ಲಿ ಜನವರಿ.02 ರಂದು ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಮೀನುಗಾರ ನಾರಾಯಣ ಮೊಗವೀರ (59) ಅವರ ಸುಳಿವು ಇನ್ನೂ ಕೂಡ ಪತ್ತೆಯಾಗಿಲ್ಲ.ಸಮುದ್ರದಲ್ಲಿ ನಾಪತ್ತೆಯಾಗಿರುವ ತಮ್ಮ ಸಹೋದರನನ್ನು ಹುಡುಕಲು ಜಿಲ್ಲಾಡಳಿತ ಸಹಕಾರ ನೀಡಬೇಕೆಂದು ವಿಶ್ವನಾಥ ಗಂಗೊಳ್ಳಿ ಮನವಿ ಮಾಡಿದ್ದಾರೆ.ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ನಿವಾಸಿ ನಾರಾಯಣ ಮೊಗವೀರ ಅವರು ತಮ್ಮ ಹೊಟ್ಟೆ ಪಾಡಿಗೆಂದು ಜನವರಿ.02 ರಂದು ಪರ್ಷಿನ್ ಬೋಟ್ ಮೂಲಕ ಮೀನುಗಾರಿಕೆಗೆ ತೆರಳಿದ್ದರು.ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ದುರಾದೃಷ್ಟ […]

ಹೇರಂಜಾಲು ಗುಡೆ ಅಂಗನವಾಡಿ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆ

ಕುಂದಾಪುರ:ಸಾಮಾಜಿಕ ಹಾಗೂ ರಾಜಕೀಯ ರಂಗದಲ್ಲಿ ವಿಶೇಷವಾದ ರೀತಿಯಲ್ಲಿ ಸೇವೆಯನ್ನು ಮಾಡುತ್ತಿರುವ ಉದ್ಯಮಿ ಕೆ.ಎಸ್ ಪ್ರಮೋದ್ ರಾವ್ ಖಂಬದಕೋಣೆ ಅವರ ಮೊಮ್ಮಗ ಪ್ರಥಮ್ ರಾವ್ ಅವರ ಆರನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಬೈಂದೂರು ತಾಲೂಕಿನ ಖಂಬದಕೋಣೆ ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಹೇರಂಜಾಲು ಗುಡೆ ದೇವಸ್ಥಾನ ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಪಠ್ಯೇತರ ಚಟುವಟಿಕೆಗಳಿಗೆಅನುಕೂಲಕರವಾಗಿರುವ ಕಿಟ್ ಮಂಗಳವಾರ ವಿತರಿಸಲಾಯಿತು.ಪ್ರಥಮ್ ರಾವ್ ಹುಟ್ಟು ಹಬ್ಬದ ಅಂಗವಾಗಿ ಮಕ್ಕಳಿಗೆ ವಿಶೇಷ […]

You cannot copy content of this page