ಪರಿಸರದ ಉಳಿವಿಗಾಗಿ ಗಿಡಗಳನ್ನು ನೆಟ್ಟು ಬೆಳೆಸಬೇಕು-ಶಾಸಕ ಕೊಡ್ಗಿ
ಕುಂದಾಪುರ:ಮಂಗಳೂರು ವೃತ್ತ,ಕುಂದಾಪುರ ವಿಭಾಗ,ಶಂಕರನಾರಾಯಣ ವಲಯದ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ಕೊಡಾಬೈಲ್ ಹೆಂಗವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶದಲ್ಲಿ ನಡೆಯಿತು.ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿಸಸಿನೆಟ್ಟು ಮಾತನಾಡಿ ಪರಿಸರದ ಉಳಿವಿಗಾಗಿ ಗಿಡಗಳನ್ನು ಹೆಚ್ಚು ಹೆಚ್ಚು ಬೆಳೆಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.