ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ- ಡಾ.ಗೋವಿಂದ ಬಾಬು ಪೂಜಾರಿ
ಕುಂದಾಪುರ:ಒಂದು ಸಮುದಾಯದ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ಪ್ರೀತಿ ವಿಶ್ವಾಸ ಮತ್ತು ಸ್ವಾವಲಂಬನೆ ಕೂಡ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ.ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ ಎಂದು ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು.ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಎರಡನೇ ವರ್ಷದ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಒಗ್ಗಟ್ಟು ಇರುವಲ್ಲಿ […]