ಇತಿಹಾಸದಲ್ಲೇ ಇದು ಅಪರೂಪದ ಬಜೆಟ್ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು:ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಕಾಂಗ್ರೆಸ್ ಧ್ಯೇಯ ಬಜೆಟ್‌ನಲ್ಲಿ ಪ್ರತಿಬಿಂಬಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2023 -24ನೇ ಸಾಲಿನ ಬಜೆಟ್ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರದ 2023 -24ನೇ ಸಾಲಿನ ಆಯವ್ಯಯ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಣ್ಣಿಸಿದ್ದಾರೆ.ಬಜೆಟ್ ಕುರಿತು ಪ್ರತಿಕ್ರಿಯೆ […]