ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರಿಗೆ ಅಂತರಾಷ್ಟ್ರೀಯ ಐಕಾನಿಕ್ ಪ್ರಶಸ್ತಿ

ಕುಂದಾಪುರ:ಶಿಕ್ಷಣ ಕ್ಷೇತ್ರದಲ್ಲಿ ವಿಶೇಷವಾದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರರವರು ಅವರು ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆಯವರು ಕೊಡಮಾಡುವಅಂತರಾಷ್ಟ್ರೀಯ ಮಟ್ಟದ ಐಕಾನಿಕ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನವೆಂಬರ್ 28 ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.

ಸ್ನಾನಕ್ಕೆ ತೆರಳಿದ ಮೂವರು ಯುವಕರು ನೀರುಪಾಲು

ಮಂಗಳೂರು:ಸ್ನಾನಕ್ಕೆಂದು ತೆರಳಿದ ಮೂವರು ಯುವಕರು ಆಯತಪ್ಪಿ ಡ್ಯಾಂ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆ ಕಾರ್ಯಕ್ರಮಕ್ಕೆ ಬಂದಿದ್ದ ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್(20) ,ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್(19) ,ಬಂಟ್ವಾಳ ಗ್ರಾಮದ ವಗ್ಗದ ಜೈಸನ್(19) ಎಂಬವರು ಊಟ ಮೂಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ […]

ಕಾಂಗ್ರೆಸ್ ಪಕ್ಷದ ಮುಖಂಡ ಸೀತಾರಾಮ ಶೆಟ್ಟಿ ಕೇರಿಕೊಡ್ಲು ನಿಧನ

ಕುಂದಾಪುರ-ಕಾಂಗ್ರೆಸ್ ಪಕ್ಷದ ಮುಖಂಡರಾದ ಹೊಸಾಡು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಕೇರಿಕೊಡ್ಲು ನಿವಾಸಿ ಸೀತಾರಾಮ ಶೆಟ್ಟಿ (65) ಅವರು ಅಲ್ಪಕಾಲಿಕ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.ಅವರು ಪತ್ನಿ,ಪುತ್ರ,ಪುತ್ರಿ ಮತ್ತು ಸಹೋದರ,ಸಹೋದರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.ಸುದೀರ್ಘ ನಲವತ್ತಕ್ಕೂ ಹೆಚ್ಚಿನ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಸೇವೆ ಸಲ್ಲಿಸಿದ್ದ ಅವರು ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಸಾಮಾಜಿಕ ಹಾಗೂ ಧಾರ್ಮಿಕ ಕೆಲಸದಲ್ಲಿ ತೊಡಗಿ ಕೊಂಡಿದ್ದು ಜನಪ್ರಿಯತೆ ಪಡೆದಿದ್ದರು.ಅಂಬಾ ಕ್ರಿಕೆಟ್ ಕ್ಲಬ್ ತಂಡದ ಸ್ಥಾಪಕ […]

You cannot copy content of this page