ಗ್ಯಾಸ್ ತುಂಬಿದ ಪಿಕಪ್ ಗಾಡಿಗೆ ಬೈಕ್ ಡಿಕ್ಕಿ:ಬೈಕ್ ಸವಾರ ಸ್ಥಳದಲ್ಲೆ ಸಾವು

ಕುಂದಾಪುರ:ಗೋವಾ ದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಬೈಕ್‍ಗೆ ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಸಾಗುತ್ತಿದ್ದ ಗ್ಯಾಸ್ ತುಂಬಿದ ಪಿಕಪ್ ಗಾಡಿ ಕುಂದಾಪುರ ತಾಲೂಕಿನ ಅರಾಟೆ ಸೇತುವೆ ಡಿವೈಡರ್ ಬಳಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಂಗಳೂರು ಮೂಲದ ನಿವಾಸಿ ರಂಜಿತ್ ಬಲ್ಲಾಳ್ (59) ಸ್ಥಳದಲ್ಲೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಮತ್ತು ಅಬ್ರಾರ್ ಮೃತ ದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು […]

ನವಚೇತನ ಸಮಾವೇಶ,ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಕುಂದಾಪುರ ತಾಲೂಕು ಸಮಿತಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ನವಚೇತನ ಸಮಾವೇಶ ಅದ್ದೂರಿಯಾಗಿ ಅಂಬೇಡ್ಕರ್ ಭವನ ಕುಂದಾಪುರದಲ್ಲಿ ಸೋಮವಾರ ನಡೆಯಿತು.ಕುಂದಾಪುರ ಶಾಸ್ತ್ರೀ ಸರ್ಕಲ್ ನಿಂದ ಅಂಬೇಡ್ಕರ್ ಭವನದ ವರೆಗೆ ಬೃಹತ್ ಮೆರವಣಿಗೆ ನಡೆಯಿತು.ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ನೂತನವಾಗಿ ಆಯ್ಕೆಗೊಂಡಿರುವ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋಧಿಸಿದರು.ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಅವರು ನವಚೇತನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ,ಈಗಾಗಲೇ ಜಿಲ್ಲೆಯಲ್ಲಿ ದಲಿತ ಚಳುವಳಿಯನ್ನು […]

ಮರವಂತೆ:ಕಡಲಿನಲ್ಲಿ ಅಪರಿಚಿತ ಶವ ಪತ್ತೆ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಸಮೀಪ ಸಮುದ್ರದಲ್ಲಿ ಸುಮಾರು 45 ಪಾಯಿಂಟ್ ನೀರಿನಲ್ಲಿ ಗಂಡಸಿನ ಅಪರಿಚಿತ ಶವ ಕೊಳೆತ ಸ್ಥಿತಿಯಲ್ಲಿ ಸೋಮವಾರ ಪತ್ತೆ ಆಗಿದೆ.ಟಿ ಶರ್ಟ್ ಧರಿಸಿರುವ ವ್ಯಕ್ತಿ ಕಪ್ಪು ಬಣ್ಣದ ಚುಕ್ಕಿಯನ್ನು ಹೊಂದಿರುವ ಬರ್ಮೂಡ ಚಡ್ಡಿ ಧರಿಸಿದ್ದು.ಕೈಯಲ್ಲಿ ಎಸ್.ವಿ ಎನ್ನುವ ಇಂಗ್ಲಿಷ್ ಅಕ್ಷರದೊಂದಿಗೆ ಹಚ್ಚೆ ಹಾಕಿಸಿಕೊಂಡಿದ್ದಾರೆ.ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿರುವ ಶವವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.ಮೀನುಗಾರರು ನೀಡಿದ ಮಾಹಿತಿ ಮೇರೆಗೆ ಜೀವ ರಕ್ಷಕ ತಂಡದ ಮುಳುಗು ತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಮತ್ತು ವೆಂಕಟೇಶ ಖಾರ್ವಿ,ಪ್ರಶಾಂತ ಖಾರ್ವಿ,ಸಚಿನ್ […]

You cannot copy content of this page