ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ ಮತ್ತು ಸಾಮಾಜಿಕ ಜಾಗ್ರತಾ ಫೌಂಡೇಶನ್ ನವ ದೆಹಲಿ ದೇಶದಾದ್ಯಂತ ಕಾರ್ಯ ನಿರ್ವಹಿಸುತ್ತಿರುವ Govt.Regd ಇದರ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ.ಧರ್ಮಗಂಗೋತ್ರಿ ಎಂದೇ ಪ್ರಖ್ಯಾತಿ ಪಡೆದಿರುವ ರಾಜ್ಯ ಪ್ರಶಸ್ತಿ ಜಿಲ್ಲಾ ಪ್ರಶಸ್ತಿ ಪುರಸ್ಕಾರ ಹಾಗೂ ಅನೇಕ ಸಂಸ್ಥೆಗಳಲ್ಲಿ ಗಣ್ಯರಾಗಿ ಹಾಗೂ ಪ್ರಮುಖರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು .ಸಿ ಸಿ. ಎಫ್ ಮುಖ್ಯಸ್ಥರು ತಿಳಿಸಿರುತ್ತಾರೆ.

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಎನ್.ಎಸ್.ಎಸ್ ಘಟಕದ ಉದ್ಘಾಟನಾ ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ (ಎನ್ .ಎಸ್.ಎಸ್) ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಕಾರ್ಯಕ್ರಮ ಜರುಗಿತು. ರಾಷ್ಟ್ರೀಯ ಸೇವಾ ಯೋಜನೆ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಹೊಂದುವಲ್ಲಿ ಸಹಕರಿಸುವುದು ,ಹಾಗೂ “ನನಗಾಗಿ ಅಲ್ಲ ನಿಮಗಾಗಿ” ಭಾವೈಕ್ಯತೆಯ ಮಹತ್ವ ಮತ್ತು ಸ್ವಚ್ಛತಾ ಅಭಿಯಾನದ ಕುರಿತು ಹಾಗೂ ಯೋಜನೆಯ ಉದ್ದೇಶ,ಗುರಿ,ಪ್ರಯೋಜನದ ಕುರಿತು ಸವಿವರವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಪ್ರಜ್ಞಾ ಮಾರ್ಪಳ್ಳಿ ಸಹಾಯಕ ಪ್ರಾಧ್ಯಾಪಕಿ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿ ಇವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.ಕಾಲೇಜಿನ […]

ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು,ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜಯದಶಮಿ ಸಂಭ್ರಮ

ಕುಂದಾಪುರ:ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಜಯ ದಶಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.ವಿಜಯ ದಶಮಿ ಉತ್ಸವದ ಅಂಗವಾಗಿ ಶ್ರೀ ದೇವಿಯ ಸನ್ನಿಧಾನದಲ್ಲಿ ಚಂಡಿಕಾ ಹೋಮ,ದುರ್ಗಾ ಹೋಮ ಮತ್ತು ವಿಶೇಷ ಪೂಜೆ.ಸಂಜೆ 5 ರಿಂದ ಶ್ರೀ ದೇವಿಯ ಕಲ್ಪೋಕ್ತ ಪೂಜೆ,ಸಹಸ್ರ ನಾಮಾರ್ಚನೆ,ಚಂಡಿಕಾ ಸಪ್ತಶತಿ ಪಾರಾಯಣ ಸೇವೆ, ಸಾಂಸ್ಕೃತಿಕ ಕಾರ್ಯಕ್ರಮ,ಅನ್ನದಾನ ಸೇವೆ ನಡೆಯಿತು.ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಪ್ರಸಾದ ಸ್ವೀಕರಿಸಿದರು.ಸೇವಾಕರ್ತರಾದ ಚಂದ್ರಶೇಖರ ಶೆಟ್ಟಿ ಮತ್ತು ನಾಗರತ್ನ ಹಾಗೂ […]

You cannot copy content of this page