ಬ್ರಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರಂಭ-2025 ಕಾರ್ಯಕ್ರಮ ಉದ್ಘಾಟನೆ
ಕುಂದಾಪುರ:ಬಹ್ಮವಾರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರಂಭ 2025,ಫ್ರೆಶರ್ಸ್ ಡೇ ಕಾರ್ಯಕ್ರಮ ಅದ್ದೂರಿಯಾಗಿ ಶನಿವಾರ ನಡೆಯಿತು.ಮೊದಲ ಬ್ಯಾಚಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಯಕ್ಷಗಾನ,ಭರತ ನಾಟ್ಯ,ನೃತ್ಯ,ಫ್ಯಾಷನ್ ಶೋ ಕಾರ್ಯಕ್ರಮ ನೊಡುಗರ ಮನ ಸೆಳೆಯಿತು.ಕಾಲೇಜಿನ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ಫಿಶರೀಸ್ ಕಾಲೇಜು ಮಂಗಳೂರು ಡಾ.ಎಸ್.ಎಂ ಶಿವಪ್ರಕಾಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ತನ್ನ ವಿಭಿನ್ನ ಕಾರ್ಯ ಚಟುವಟಿಕೆ ಮೂಲಕ ವಿದ್ಯಾಲಕ್ಷ್ಮೀ ಶಿಕ್ಷಣ ಸಂಸ್ಥೆ ಜಿಲ್ಲೆಯಲ್ಲಿ ಉತ್ತಮ ಹೆಸರನ್ನು ಗಳಿಸಿದೆ.ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವುದರ ಜತೆಗೆ,ಉದ್ಯೋಗ ಮೇಳಗಳನ್ನು ಆಯೋಜನೆ ಮಾಡಿ ಅವರಿಗೆ ಸ್ವಾವಲಂಬಿ ಬದುಕನ್ನು […]