ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ನಡೆದಿದೆ.ಬಸ್‌ನ ಡ್ರೈವರ್‌ ಬಸ್‌ನ ಚಕ್ರದಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತಪಟ್ಟವರನ್ನು ಮೈಸೂರು ಮೂಲದ ಭರತ್(28) ಎಂದು ಗುರುತಿಸಲಾಗಿದೆ.ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ,ಬಳಿಕ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಬಸ್ ನಲ್ಲಿ ಚಾಲಕ ಹಾಗೂ ಸಹ ಚಾಲಕರಿಬ್ಬರೂ ಮಾತ್ರ ಪ್ರಯಾಣಿಸುತ್ತಿದ್ದು ಸಹ ಚಾಲಕ ಅವಿನಾಶ್ ಎಂಬುವವರು ಅಪಾಯದಿಂದ […]

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ ಮತ್ತು ಸಾಮಾಜಿಕ ಜಾಗ್ರತಾ ಫೌಂಡೇಶನ್ ನವ ದೆಹಲಿ ದೇಶದಾದ್ಯಂತ ಕಾರ್ಯ ನಿರ್ವಹಿಸುತ್ತಿರುವ Govt.Regd ಇದರ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ.ಧರ್ಮಗಂಗೋತ್ರಿ ಎಂದೇ ಪ್ರಖ್ಯಾತಿ ಪಡೆದಿರುವ ರಾಜ್ಯ ಪ್ರಶಸ್ತಿ ಜಿಲ್ಲಾ ಪ್ರಶಸ್ತಿ ಪುರಸ್ಕಾರ ಹಾಗೂ ಅನೇಕ ಸಂಸ್ಥೆಗಳಲ್ಲಿ ಗಣ್ಯರಾಗಿ ಹಾಗೂ ಪ್ರಮುಖರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು .ಸಿ ಸಿ. ಎಫ್ ಮುಖ್ಯಸ್ಥರು ತಿಳಿಸಿರುತ್ತಾರೆ.

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಎನ್.ಎಸ್.ಎಸ್ ಘಟಕದ ಉದ್ಘಾಟನಾ ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ (ಎನ್ .ಎಸ್.ಎಸ್) ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಕಾರ್ಯಕ್ರಮ ಜರುಗಿತು. ರಾಷ್ಟ್ರೀಯ ಸೇವಾ ಯೋಜನೆ ಎಂಬುದು ವಿದ್ಯಾರ್ಥಿ ಜೀವನದಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಹೊಂದುವಲ್ಲಿ ಸಹಕರಿಸುವುದು ,ಹಾಗೂ “ನನಗಾಗಿ ಅಲ್ಲ ನಿಮಗಾಗಿ” ಭಾವೈಕ್ಯತೆಯ ಮಹತ್ವ ಮತ್ತು ಸ್ವಚ್ಛತಾ ಅಭಿಯಾನದ ಕುರಿತು ಹಾಗೂ ಯೋಜನೆಯ ಉದ್ದೇಶ,ಗುರಿ,ಪ್ರಯೋಜನದ ಕುರಿತು ಸವಿವರವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಪ್ರಜ್ಞಾ ಮಾರ್ಪಳ್ಳಿ ಸಹಾಯಕ ಪ್ರಾಧ್ಯಾಪಕಿ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿ ಇವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.ಕಾಲೇಜಿನ […]

You cannot copy content of this page