*ಜಡ್ಕಲ್ – ಮುದೂರು: ಕಸ್ತೂರಿ ರಂಗನ್ ವರದಿಗೆ ವಿರೋಧ -ಶಾಸಕ ಗುರುರಾಜ್ ಗಂಟಿಹೊಳೆ ಗ್ರಾಮಸ್ಥರೊಂದಿಗೆ ಮಾತುಕತೆ

ಕುಂದಾಪುರ:ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್, ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.ಈ ಸಂದರ್ಭ ಮಾತನಾಡಿದ ಶಾಸಕ ಗಂಟಿಹೊಳೆ,ಮೀಸಲು ಅರಣ್ಯ ಮತ್ತು ಬಫರ್ ಝೋನ್ ಪ್ರದೇಶಗಳಲ್ಲಿ ವಾಸಮಾಡುತ್ತಿರುವ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗಬಹುದಾದ ಸಮಸ್ಯೆಗಳಿಗೆ ಭಯಗೊಂಡಿರುವ ಜಡ್ಕಲ್, ಮುದೂರು ಗ್ರಾಮದ ಜನರು ಈಗಾಗಲೇ ಅಸಮಾಧಾನ ಹೊರಹಾಕಿದ್ದಾರೆ.ಜೊತೆಗೆ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸುವ ಮೂಲಕ […]

ಗಂಗೊಳ್ಳಿ ಮೂಲದ ವ್ಯಕ್ತಿ:ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

ಕುಂದಾಪುರ:ಗಂಗೊಳ್ಳಿ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ ಪೋಸ್ಟ್ ಎದುರಿನ ನಿವಾಸಿ ಬಷೀರ್ ಅಹ್ಮದ್ ಎಂಬುವರ ಪುತ್ರ ಮುಬಾಶೀರ್ ಬಷೀರ್ (30) ಸೌದಿ ಅರೇಬಿಯಾದಲ್ಲಿ ಹೃದಯಾಘಾತ ದಿಂದ ಬುಧವಾರ ನಿಧನ ಹೊಂದಿದ್ದಾರೆ.ಸೌದಿಯಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಹಾಗೂ ಮೃತರ ಕುಟುಂಬಸ್ಥರು ಸಾವಿನ ಸುದ್ದಿಯನ್ನು ದೃಢಪಡಿಸಿದ್ದಾರೆ.ಎರಡು ವರುಷಗಳ ಹಿಂದೆ ಮಹಾರಾಷ್ಟ್ರದ ಪೂನಾ ಮೂಲದ ಯುವತಿಯನ್ನು ವಿವಾಹವಾಗಿದ್ದ ಇವರು, ಪತ್ನಿಯ ಜೊತೆಯಲ್ಲಿಯೇ ಸೌದಿ ಯಲ್ಲಿ ಉದ್ಯೋಗದಲ್ಲಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ಕುಂದಾಪುರ ಹೆಚ್ ಎಂ ಎಂ ಶಾಲೆ,ಪ್ರೌಡ ಶಿಕ್ಷಣವನ್ನು ವಿ.ಕೆ ಆರ್ ಆಂಗ್ಲ […]

ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಕೊಂಬೆ ಮುರಿದು ಬಿದ್ದು:ಸವಾರನಿಗೆ ಗಾಯ

ಕುಂದಾಪುರ:ಸ್ಕೂಟರ್ ನಲ್ಲಿ ಗಂಗೊಳ್ಳಿ ಯಿಂದ ತ್ರಾಸಿ ಕಡೆಗೆ ಸಾಗುತ್ತಿದ್ದಾಗ ತ್ರಾಸಿ ಹೋಲಿ ಕ್ರಾಸ್ ಸಮೀಪ ಸ್ಕೂಟರ್ ಮೇಲೆ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಸ್ಕೂಟರ್ ಸವಾರ ಗಂಗೊಳ್ಳಿ ನಿವಾಸಿ,ಮಸೀದಿ ಧರ್ಮಗುರು ಜನಾಬ್ ಮೌಲಾನ ಮುಹಮ್ಮದ್ ಮತೀನ್ ಸಾಹಬ್ ಸಿದ್ದಿಕಿ (51) ಅವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದಿದ್ದಾರೆ.ತಲೆ ಹಾಗೂ ಕುತ್ತಿಗೆಗೆ ಗಾಯವಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

You cannot copy content of this page