ಬ್ರಹ್ಮಾವರದ ವಿದ್ಯಾಲಕ್ಷ್ಮೀ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಶ 2024-ಫ್ರೆಷರ್ಸ್ ಡೇ ಕಾರ್ಯಕ್ರಮ
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಸ್ಪರ್ಶ 2024 ಫ್ರೇಷಸ್ ಡೇ ಕಾರ್ಯಕ್ರಮ ನಡೆಯಿತು.ಕಾಲೇಜಿಗೆ ಆರಂಭಿಕ ವರ್ಷದಲ್ಲಿ ದಾಖಲಾತಿ ಹೊಂದಿರುವ ಮೊದಲ ಬ್ಯಾಚಿನ ವಿದ್ಯಾರ್ಥಿಗಳು ಸ್ಪರ್ಶ -2024 ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಪಾಲ್ಗೊಂಡು,ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ನಟಿ,ಗಾಯಕಿ ರೂಪದರ್ಶಿಯಾಗಿರುವ ಮಹಿಮಾ ಭಂಡಾರಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ,ವಿದ್ಯಾರ್ಥಿ ಜೀವನ ಎಂಬುದು ಅನೇಕ ಅವಕಾಶ ಗಳನ್ನು ಹೊಂದಿರುವ ಆಗರವಾಗಿದೆ.ಇಂತಹ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿ ಕೊಂಡು. ಜೀವನದಲ್ಲಿ ಉತ್ತುಂಗಕ್ಕೇರಲು ಸಾಧ್ಯವಿದೆ ಎಂದು ತಿಳಿಸಿದರು. ವಿದ್ಯಾ ಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ […]