ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು ಖಾಸಗಿ ಜಾಗದ ಮಾಲೀಕರು ಬಂದ್ ಮಾಡಿರುವುದನ್ನು ವಿರೋಧಿಸಿ.ಸಾರ್ವಜನಿಕ ಸ್ಮಶಾನವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ಕಂಚುಗೋಡು ಸನ್ಯಾಸಿ ಬಲ್ಲೆ ಗ್ರಾಮಸ್ಥರು ಗುಜ್ಜಾಡಿ ಗ್ರಾಮ ಪಂಚಾಯಿತಿ ಎದುರುಗಡೆ ಅಹೋರಾತ್ರಿ ಧರಣಿ ಸತ್ಯಾಗ್ರಹದ ಮೂಲಕ ಪ್ರತಿಭಟನೆಯನ್ನು ಶುಕ್ರವಾರ ನಡೆಸಿದರು.ಸ್ಮಶಾನ ಸಂಪರ್ಕಕ್ಕೆ ದಾರಿ ಕಲ್ಪಿಸುವುದರ ಜತೆಗೆ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಸುಮಾರು ಎರಡು ಶತಮಾನಕ್ಕೂ ಹೆಚ್ಚು ಕಾಲ […]