ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ವಾರ್ಷಿಕ ಮಹಾಸಭೆ:50 ಲಕ್ಷ.ರೂ ಲಾಭ,14% ಡಿವಿಡೆಂಡ್ ಘೋಷಣೆ
ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಅದರ 2023-24ನೇ ಸಾಲಿನ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ತಲ್ಲೂರು ಜೈ ದುರ್ಗಾ ಮಾತಾ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡಿರುವ ಭರತ್ ಬಾಬು ದೇವಾಡಿಗ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.ಸಂಘದ ಸಿಇಒ ವಿಶಾಲ ದೇವಾಡಿಗ ವಾರ್ಷಿಕ ವರದಿ ಮಂಡಿಸಿ ಸದಸ್ಯರಿಂದ ಅನುಮೋದನೆಯನ್ನು ಪಡೆದು ಕೊಂಡರು.ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಚಂದ್ರ ದೇವಾಡಿಗ ಹರ್ಕೂರು ಮಾತನಾಡಿ,ಸ್ವ ಸಹಾಯ ಸಂಘಗಳನ್ನು ಹುಟ್ಟು ಹಾಕುವುದರ ಮೂಲಕ […]























































































































































































































































































































































































































































































































































































































































































































































































































































































































































































































































































































































































































































































































































































































































































