ಸಿಎಂ ವಿರುದ್ಧದ ತನಿಖೆಗೆ ಹೈಕೋರ್ಟ್ ಆದೇಶ:ರಾಜ್ಯಪಾಲರ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು:ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ.ಸಿಎಂ ಅರ್ಜಿಯನ್ನು ಹೈಕೋರ್ಟ್ ತಿರಸ್ಕಾರ ಮಾಡಿದೆ.ಹೈಕೋರ್ಟ್ ಆದೇಶ ದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಕುರ್ಚಿಗೆ ರಾಜಿನಾಮೆ ನೀಡುವಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಒತ್ತಾಯಿಸಲಿದೆ.

ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ

ಕುಂದಾಪುರ:ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ನಿನ್ನೆ ಶನಿವಾರ ನಿಧನ ಹೊಂದಿದರು.ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ,ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದರು.ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು.ಪೀಠಿಕಾ ಮತ್ತು ಒಡ್ಡೋಲಗದ ಪಾತ್ರಗಳಿಂದ ಆರಂಭಗೊಂಡ ಇವರ ಯಕ್ಷಪಯಣ ಮುಂದೆ ಹವ್ಯಾಸಿ ಸಂಘಸಂಸ್ಥೆಗಳ ಆಟಗಳಲ್ಲಿ ಅತಿಕಾಯ, ರಕ್ತಬೀಜದಂತಹ ಪ್ರಮುಖ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವಷ್ಟು ಪ್ರೌಢತೆ ಸಾಧಿಸಿತ್ತು. […]

ಬುಲ್ ಟ್ರಾಲ್ ಫಿಶಿಂಗ್ ಬೋಟ್ ಅಡ್ಡಗಟ್ಟಿದ ಮೀನುಗಾರರು

ಕುಂದಾಪುರ:ಬೈಂದೂರು ವಲಯ ನಾಡ ದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ.ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಫಿಶಿಂಗ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲಬುಲ್‌ಟ್ರಾಲ್‌ ಲೈಟ್‌ ಫಿಶಿಂಗ್‌ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ.ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ಬುಲ್ ಟ್ರಾಲ್ ಬೋಟ್ ಗಳ ವಿರುದ್ಧ […]

You cannot copy content of this page