ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವರಿಗೆ ಬೆಳ್ಳಿ ರಥ ಸಮರ್ಪಣೆ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವರಿಗೆ ಬೆಳ್ಳಿ ರಥವನ್ನು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ಸಮರ್ಪಣೆ ಮಾಡಲಾಯಿತು.ಬೆಳ್ಳಿರಥ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಶ್ರೀ ದೇವರಿಗೆ ಹೂವಿನ ಅಲಂಕಾರ ಪೂಜೆ,ಹಣ್ಣುಕಾಯಿ ಮತ್ತು ಮಂಗಳಾರತಿ ಸೇವೆ ಹಾಗೂ ಅನ್ನದಾನ ಸೇವೆಯನ್ನು ಸಲ್ಲಿಸಲಾಯಿತು. ಸಹಸ್ರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ದರ್ಶನ ಪಡೆದರು.ಬೆಳ್ಳಿ ರಥ ಬೃಹತ್ ಪುರಮೆರವಣಿಗೆ ಶ್ರೀರಾಮ ದೇವಸ್ಥಾನದಿಂದ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದ ವರೆಗೆ ವಿಜೃಂಭಣೆಯಿಂದ ನಡೆಯಿತು.ಶ್ರೀ ರಾಮ ದೇವರಿಗೆ […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಉಡುಪಿ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಶಿಕ್ಷಕರು ಉತ್ಸಾಹ ಭರಿತರಾಗಿ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ,ನಿರ್ದೇಶಕಿಮಮತಾ, ಪ್ರಾಂಶುಪಾಲರಾದ ರವಿರಾಜ್ ಶೆಟ್ಟಿ ಅವರು ಮಾತನಾಡಿ,ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಕಾರ್ಯಕ್ರಮ ಆಯೋಜನೆ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕ್ಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಪ್ರತಿಕ್ಷಾ ಸ್ವಾಗತಿಸಿದರು, ವಿದ್ಯಾರ್ಥಿನಿ ಜಯಶ್ರೀ ನಿರೂಪಿಸಿದರು,ವಿದ್ಯಾರ್ಥಿನಿ ವರ್ಷ ವಂದಿಸಿದರು.

You cannot copy content of this page