ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ

ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆಲೂರು ಮೂಕಾಂಬಿಕಾ ಸಭಾಭವನದಲ್ಲಿ ಸೋಮವಾರ ನಡೆಯಿತು.ಸಂಘದ ಪದಾಧಿಕಾರಿಗಳು ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಪದಾಧಿಕಾರಿಗಳು,ಅಥಿತಿಗಳು,ಸಮಾಜ ಬಾಂಧವರು ಉಪಸ್ಥಿತರಿದ್ದರು.

ಶೋಷಿತರ ಸ್ವಾಭಿಮಾನಿ ಸಮಾವೇಶ,ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ ಮತ್ತು ಆಲೂರು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆಲೂರು ಮೂಕಾಂಬಿಕಾ ಸಭಾಭವನದಲ್ಲಿ ಸೋಮವಾರ ನಡೆಯಿತು.ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಷ್ಪಾರ್ಚನೆ ಸಲ್ಲಿಸುವುದರ ಮುಖೇನ ಶೋಷಿತರ ಸಮಾವೇಶಕ್ಕೆ ಚಾಲನೆಯನ್ನು ನೀಡಲಾಯಿತು.ವಕೀಲರಾದ ಮಂಜುನಾಥ ಗಿಳಿಯಾರ್ ಮತ್ತು ವಿಜಯ ಕುಮಾರ್ ಅವರನ್ನು ಆಲೂರು ಗ್ರಾಮ ಶಾಖೆ ವತಿಯಿಂದ ಸನ್ಮಾನಿಸಲಾಯಿತು.ಅಂಬೇಡ್ಕರ್ ಹೋರಾಟ ಕುರಿತಾದ ಧ್ವನಿ ಸುರುಳಿಯನ್ನು ಬಿಡುಗಡೆ ಮಾಡಲಾಯಿತು.ಸಮಾಜದ ಹಿರಿಯ […]

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ,ಬೃಹತ್ ಮಾನವ ಸರಪಳಿ ರಚನೆ

ಕುಂದಾಪುರ:ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರ,ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬೈಂದೂರು ತಾಲೂಕು ಆಡಳಿತ ಮತ್ತು ಕುಂದಾಪುರ ತಾಲೂಕು ಆಡಳಿತ,ತ್ರಾಸಿ ಮತ್ತು ಮರವಂತೆ ಪಂಚಾಯಿತಿ ಸಹಕಾರದೊಂದಿಗೆ ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‍ನಲ್ಲಿ ಮಾನವ ಸರಪಳಿ,ತಾಯಿಯ ಹೆಸರಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.ಸಂವಿಧಾನ ಪೀಠಿಕೆಯನ್ನು ಓದುವುದರ ಮುಖೇನ ಮಾನವ ಸರಪಳಿಯನ್ನು ರಚಿಸಲಾಯಿತು.ಕುಣಿತ ಭಜನೆ,ಚಂಡೆವಾದನ,ಯಕ್ಷಗಾನ ಮತ್ತು ಟ್ಯಾಬ್ಲೋ ವೇಷ ಕಾರ್ಯಕ್ರಮದ ಸೊಬಗನ್ನು ಹೆಚ್ಚಿಸಿತು.ಜಿಲ್ಲೆಯ ಗಡಿ ಭಾಗ ಶಿರೂರು ಗೇಟ್ […]

You cannot copy content of this page