ಮಂಗಳೂರು:ಕುಕ್ಕಿಲದಲ್ಲಿ ಗುಡ್ಡೆ ಕುಸಿತ ಎರಡು ಮನೆಗಳಿಗೆ ಹಾನಿ

ಮಂಗಳೂರು:ವಿಟ್ಲ ಪಡ್ನೂರು ಗ್ರಾಮದ ಕುಕ್ಕಿಲ ಎಂಬಲ್ಲಿ ಗುಡ್ಡ ಕುಸಿದು ಎರಡು ಮನೆಗಳಿಗೆ ಭಾಗಶಃ: ಹಾನಿಯಾಗಿದೆ. ಮನೆಯವರೆಲ್ಲ ಅದೃಷ್ಟವಶಾತ್ ಪಾರಾಗಿದ್ದಾರೆ.‌ಕುಕ್ಕಿಲ ನಿವಾಸಿ ಕಟ್ಟಪುಣಿ ಅಬ್ದುಲ್ಲ ಹಾಜಿಯವರ ಮನೆ ಬಳಿಯ ಗುಡ್ಡ ಕುಸಿದು ಬಿದ್ದಿದೆ. ಅದೇ ರೀತಿ ಅಬ್ದುಲ್ ರಹಿಮಾನ್ ಎಂಬವರ ಮನೆ ಹಿಂಬದಿಯ ಎತ್ತರದ ಗುಡ್ಡ ಕುಸಿದು ಭಾರಿ ಪ್ರಮಾಣದಲ್ಲಿ ಮಣ್ಣು ಬಿದ್ದಿದೆ.ದುರಂತದ ಸಂದರ್ಭದಲ್ಲಿ ಶಬ್ದ ಕೇಳಿಸಿಕೊಂಡ ಮನೆಯವರೆಲ್ಲ ಹೊರಗಡೆ ಓಡಿದ್ದರಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಹಾರಾಜ ಸ್ವಾಮಿ ಶ್ರೀವರಾಹ ದೇವರ ಜಾತ್ರಾ ಮಹೋತ್ಸವ ಸಂಪನ್ನ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯಲಿರುವ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು.ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀವರಾಹ ಸ್ವಾಮಿ,ಶ್ರೀವಿಷ್ಣು,ಶ್ರೀ ನರಸಿಂಹ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣು ಕಾಯಿ ಸೇವೆಯನ್ನು ನೆರವೇರಿಸಲಾಯಿತು.ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ದರ್ಶನ ಪಡೆದು ಸೇವೆಯನ್ನು ಅರ್ಪಿಸಿದರು.ಪಂಚಕಜ್ಜಾಯ,ಪ್ರಸಾದ ವಿತರಣೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ […]

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಬಿ ವೈ ರಾಘವೇಂದ್ರ ಮನವಿ ಸಲ್ಲಿಕೆ

ಕುಂದಾಪುರ:ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.ಸುಮಾರು 1200 ವರ್ಷಗಳ ಇತಿಹಾಸವನ್ನು ಹೊಂದಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ.ವಿವಿಧ ರಾಜ್ಯಗಳಿಂದ ಹಾಗೂ ಹೊರ ದೇಶಗಳಿಂದ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ.ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ […]

You cannot copy content of this page