ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ ನಿರ್ದೇಶಕರಾಗಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ಸುರೇಂದ್ರ ಗುಡ್ಡೆಹೋಟೆಲ್ ನಾಡ ಅವರು ಆಯ್ಕೆಯಾಗಿದ್ದಾರೆ.ಸಂಸ್ಥಾಪಕ ಅಧ್ಯಕ್ಷ ಡಾ.ವಿ.ಟಿ ವೆಂಕಟೇಶಯ್ಯ ಅವರು ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.ಅಧ್ಯಕ್ಷೆ ಸುಮಿತ್ರ ಮಾರುತಿ ದುರ್ಗಿ,ಉಪಾಧ್ಯಕ್ಷ ಬಸವರಾಜು ಹಟ್ಟಿಹೊಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಸುರೇಂದ್ರ ಗುಡ್ಡೆಹೋಟೆಲ್ ಅವರು ಪ್ರಸ್ತುತ ಶ್ರೀ ಸಿದ್ದಲಿಂಗೇಶ್ವರ ಕನ್ನಡ ಪ್ರೌಢಶಾಲೆಯಲ್ಲಿ (ಮಾಗಡಿ ರಸ್ತೆ ಬೆಂಗಳೂರು ದಕ್ಷಿಣ ಜಿಲ್ಲೆ) ಅಧ್ಯಾಪಕರಾಗಿ […]

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ ವಸತಿ ಶಾಲೆ ಸಹೋದರ ವಿದ್ಯಾರ್ಥಿಗಳಾದ ಅನ್ವಿಶ್ ಕುಮಾರ್ ಪ್ರಥಮ ಸ್ಥಾನ ಪಡೆದು ವಿನ್ನರ್ ಪ್ರಶಸ್ತಿ ಜಯಿಸಿದ್ದಾರೆ ಹಾಗೂ ವಿನಿಶ್ ಕುಮಾರ್ ದ್ವಿತೀಯ ಸ್ಥಾನ ಪಡೆದಿದ್ದಾರೆ.ಶಿಕ್ಷಕಿ ಅನುಷಾ ಸಿ ಬಂಗೇರಾ ಗಂಗೊಳ್ಳಿ ಮತ್ತು ಕಾವ್ರಾಡಿ ವಿಜಯ್ ಕುಮಾರ್ ದಂಪತಿ ಪುತ್ರರರು.ಕುಂದಾಪುರ ಸೆಂಟರ್ ಪ್ರಸನ್ನ ಕೆ.ಬಿ,ಗಂಗೊಳ್ಳಿ ಸೆಂಟರ್‍ನ ಶಿಕ್ಷಕಿ ಸುನೀತಾ ತರಬೇತಿ ನೀಡಿದ್ದರು.

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಗಳಿಸಿರುವ ಹೊಸಾಡು ಗ್ರಾಮದ ನಿವಾಸಿ ಸವಿತಾ ಸುಕುಮಾರ ಸುವರ್ಣ ಅವರ ಪುತ್ರಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ (ಬೋರ್ಡ್ ಹೈಸ್ಕೂಲ್) ವಿದ್ಯಾರ್ಥಿನಿ ವೈಷ್ಣವಿ ಎಸ್.ಎಚ್ ಅವರಿಗೆ ಕುಂದಾಪುರ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ಪರವಾಗಿ ಅಭಿನಂದಿಸಿ.50 ಸಾವಿರ ರೂಪಾಯಿ ಮೌಲ್ಯದ ಚೆಕ್ ವಿತರಿಸಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ,ಕುಂದಾಪುರ […]

You cannot copy content of this page